ಯಲ್ಲಾಪುರ: ಸಾರ್ವಜನಿಕರ ಅನುಕೂಲಕ್ಕಾಗಿ ಉತ್ತರ ಕನ್ನಡ ಜಿಲ್ಲೆಯ ಎಲ್ಲ ಬಸ್ ನಿಲ್ದಾಣಗಳಲ್ಲಿ ಪ್ರತ್ಯೇಕ ಪುಸ್ತಕ ಮಳಿಗೆಗಳನ್ನು ಸ್ಥಾಪಿಸುವ ಕುರಿತು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ರಸ್ತೆ ಸಾರಿಗೆ ನಿಗಮದ ಹಿರಿಯ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.
ಯಲ್ಲಾಪುರದ ಬಸ್ ನಿಲ್ದಾಣದಲ್ಲಿ ಪುಸ್ತಕ ಮಳಿಗೆ ಸ್ಥಾಪಿಸುವ ಕುರಿತು ವಿಶ್ರಾಂತ ಪ್ರಾಂಶುಪಾಲ ಶ್ರೀರಂಗ ಕಟ್ಟಿ ಆಗ್ರಹಿಸಿದ ಹಿನ್ನೆಲೆಯಲ್ಲಿ ಸಚಿವರು ತಕ್ಷಣ ಸ್ಪಂದಿಸಿ, ಅಧಿಕಾರಿಗಳ ಜೊತೆಗೆ ದೂರವಾಣಿ ಮೂಲಕ ಮಾತನಾಡಿ ಆದೇಶಿಸಿದರು.
ಈ ಸಂದರ್ಭದಲ್ಲಿ, ವಿಶ್ರಾಂತ ಪ್ರಾಚಾರ್ಯ ಶ್ರೀರಂಗ ಕಟ್ಟಿ, ಪ.ಪಂ. ಅಧ್ಯಕ್ಷೆ ಸುನಂದಾದಾಸ, ರಾಜೇಂದ್ರ ಬದ್ದಿ, ಎಂ.ಎಂ.ಶೇಖ, ಗೋಪಾಲ ನೇತ್ರೆಕರ, ಬಿಜೆಪಿ ತಾಲೂಕಾಧ್ಯಕ್ಷ ಜಿ.ಎನ್. ಗಾಂವಕಾರ ಉಪಸ್ಥಿತರಿದ್ದರು.