Slide
Slide
Slide
previous arrow
next arrow

ರಘುನಾಥ ಪೈ ನ್ಯೂ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷರಾಗಿ ಆಯ್ಕೆ

300x250 AD

ಹೊನ್ನಾವರ: ಜ.3 ರಂದು ನಡೆದ ಚುನಾವಣೆಯಲ್ಲಿ ಪ್ರತಿಷ್ಠಿತ ವಿದ್ಯಾ ಸಂಸ್ಥೆ ನ್ಯೂ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷರಾಗಿ ಪಟ್ಟಣದ ಸಾಮಾಜಿಕ, ಶೈಕ್ಷಣಿಕ ಹಿತಚಿಂತಕ, ಹೋರಾಟಗಾರ ರಘುನಾಥ ಜಿ. ಪೈ ಅವಿರೋಧ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ನ್ಯೂ ಎಜ್ಯುಕೇಶನ್ ಸೊಸೈಟಿಯ ಅಡಿಯಲ್ಲಿ ಬರುವ ಎಲ್ಲ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಮತ್ತು ಶೈಕ್ಷಣಿಕ ಚಟುವಟಿಕೆಗಳನ್ನು ಜಾರಿಗೊಳಿಸುವುದರ ಮೂಲಕ ರಾಜ್ಯದಲ್ಲಿಯೇ ಮಾದರಿ ಶಾಲೆಯನ್ನಾಗಿ ಮಾಡಬೇಕೆಂಬ ಆಕಾಂಕ್ಷೆಯನ್ನು ನೂತನ ಅಧ್ಯಕ್ಷರು ವ್ಯಕ್ತಪಡಿಸಿದರು.
ಉಪಾಧ್ಯಕ್ಷರಾಗಿ ನಾಗೇಶ ಆರ್ ಪ್ರಭು, ಕಾರ್ಯದರ್ಶಿಯಾಗಿ ನಾಗರಾಜ ಕಾಮತ ಮತ್ತು ಕೋಶಾಧ್ಯಕ್ಷರಾಗಿ ಗಣಪತಿ ಎಚ್. ಕಾಮತ ಅವಿರೋಧ ಆಯ್ಕೆಯಾಗಿದ್ದಾರೆ.

300x250 AD
Share This
300x250 AD
300x250 AD
300x250 AD
Back to top