ಕಾರವಾರ : ಬೆಂಗಳೂರಿನ ಯುವ ಸಬಲೀಕರಣ ಇಲಾಖೆ, ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಸಂಯುಕ್ತ ಆಶ್ರಯದಲ್ಲಿ ಮಂಡ್ಯದಲ್ಲಿ ಆಯೋಜಿಸಿದ್ದ 2021- 22ನೇ ಸಾಲಿನ ರಾಜ್ಯ ಮಟ್ಟದ ಯುವಜನೋತ್ಸವದ ವೈಯಕ್ತಿಕ ವಿಭಾಗದ ಸ್ಪರ್ಧೆಗಳಲ್ಲಿ ಏಕಪಾತ್ರಾಭಿನಯದಲ್ಲಿ ಅಭಿಷೇಕ ಜಿ. ಕಳಸ ಹಾಗೂ ಆಶುಭಾಷÀಣದಲ್ಲಿ ಪ್ರಸಾದ್ ಜಿ. ಕಳಸ ರಾಜ್ಯ ಮಟ್ಟಕ್ಕೆ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಅವರನ್ನು ಕಚೇರಿಯಲ್ಲಿ ಭೇಟಿ ಮಾಡಿದ ಉತ್ತರ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಈ ಸಾಧನೆಗಾಗಿ ಅಭಿನಂದಿಸಿ ರಾಷ್ಟ್ರಮಟ್ಟದಲ್ಲಿ ಯಶಸ್ಸಿಗಾಗಿ ಶುಭಹಾರೈಸಿದರು.