ಯಲ್ಲಾಪುರ: ಪತ್ರಕರ್ತೆ ದಿವ್ಯಾ ಹೆಗಡೆ ಕಬ್ಬಿನಗದ್ದೆ ಅವರ ಚೊಚ್ಚಲ ಪುಸ್ತಕ “ನಿತ್ಯವಿದು ಪರಿವರ್ತನ” ಬಿಡುಗಡೆಗೆ ಸಿದ್ಧಗೊಂಡಿದೆ.
ಸ್ಪೂರ್ತಿದಾಯಕ ಬರಹಗಳನ್ನು ಒಳಗೊಂಡ ಈ ಪುಸ್ತಕವನ್ನು ಬುಧವಾರ ಸಂಜೆ 5 ಗಂಟೆಗೆ ನಾಯ್ಕನಕೆರೆಯ ಶಾರದಾಂಬಾ ದೇವಿ ಸನ್ನಿಧಿಯಲ್ಲಿ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಲೋಕಾರ್ಪಣೆ ಮಾಡಲಿದ್ದಾರೆ. ಕನ್ನಡ ಸಾಹಿತ್ಯ ಅಕಾಡೆಮಿ ಸದಸ್ಯ ಹಾಗೂ ಲೇಖಕ ಸಂತೋಷ್ ತಮ್ಮಯ್ಯ ಅವರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಕೃಷಿ ಹಾಗೂ ಪರಿಸರ ಬರಹಗಾರ ಶಿವಾನಂದ ಕಳವೆ ಕೃತಿ ಪರಿಚಯ ಮಾಡಲಿದ್ದಾರೆ. ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಪ್ರಮೋದ ಹೆಗಡೆ, ರಾಜ್ಯ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅಜಿತ್ ಹೆಗಡೆ ಬೆಳ್ಳೆಕೇರಿ, ಕೃಷಿ ಮತ್ತು ಗ್ರಾಮೀಣ ಭೂ ಅಭಿವೃದ್ಧಿ ಬ್ಯಾಂಕ್ ನ ಅಧ್ಯಕ್ಷ ಆರ್.ಎಸ್ ಭಟ್ಟ ಮೊದಲಾದವರು ಭಾಗವಹಿಸಲಿದ್ದಾರೆ. ಪುಸ್ತಕವನ್ನು ಬೆಂಗಳೂರಿನ ಸ್ನೇಹ ಬುಕ್ ಹೌಸ್ ಹೊರತರುತ್ತಿದೆ. ಈ ಕೃತಿಗೆ ಸೋಂದಾ ಸ್ವರ್ಣವಲ್ಲಿ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳು ಮುನ್ನುಡಿ ಬರೆದಿದ್ದಾರೆ. ಪದ್ಮಶ್ರೀ ಪುರಸ್ಕೃತ ಡಾ. ವಿಜಯ ಸಂಕೇಶ್ವರ, ಸಿ.ಟಿ.ರವಿ, ಶಿವರಾಮ ಹೆಬ್ಬಾರ್, ಶಾಂತಾರಾಮ ಸಿದ್ದಿ, ಸಂತೋಷ್ ತಮ್ಮಯ್ಯ, ಶಿವಾನಂದ ಕಳವೆ ಮೊದಲಾದ ಗಣ್ಯರು ಪುಸ್ತಕದ ಬಗ್ಗೆ ಅಭಿಪ್ರಾಯವನ್ನು ಬರೆದಿದ್ದಾರೆ.