• first
    second
    third
    previous arrow
    next arrow
  • ಬೂಸ್ಟರ್ ಡೋಸ್ ಲಸಿಕಾಭಿಯಾನಕ್ಕೆ ಡಿಸಿ ಮುಲ್ಲೈ ಮುಗಿಲನ್ ಚಾಲನೆ

    300x250 AD

    ಕಾರವಾರ: ಕೊರೋನಾ ಮೂರನೇ ಅಲೆ ಆರಂಭವಾಗಿರುವ ಹಿನ್ನೆಲೆಯಲ್ಲಿ 60 ವರ್ಷ ಮೇಲ್ಪಟ್ಟ ಅನಾರೋಗ್ಯ ಪೀಡಿತರು, ಆರೋಗ್ಯ ಕಾರ್ಯಕರ್ತರು ಹಾಗೂ ಮುಂಚೂಣಿ ಕಾರ್ಯಕರ್ತರಿಗೆ ಮುಂಜಾಗ್ರತಾ ಡೋಸ್ (ಬೂಸ್ಟರ್ ಡೋಸ್) ಲಸಿಕಾ ಅಭಿಯಾನಕ್ಕೆ ಜಿಲ್ಲೆಯಾದ್ಯಂತ ಸೋಮವಾರ ಚಾಲನೆ ನೀಡಲಾಗಿದೆ.


    ಜಿಲ್ಲಾ ಮಟ್ಟದ ಬೂಸ್ಟರ್ ಡೋಸ್ ವಿತರಣಾ ಕಾರ್ಯಕ್ರಮಕ್ಕೆ ತಾಲೂಕಿನ ಬೈತಖೋಲ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸದ್ಯ ಲಸಿಕೆಯ ಕೊರತೆ ಇಲ್ಲ. ಯಾವುದೇ ಹಿಂಜರಿಕೆಯಿಲ್ಲದೇ ಲಸಿಕೆ ಪಡೆಯಲು ಅರ್ಹರು ಮುಂದೆ ಬರಬೇಕು ಎಂದರು.

    300x250 AD


    ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ತಾಲೂಕು ಆಸ್ಪತ್ರೆ, ಸಾರ್ವಜನಿಕ ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ಕಾರವಾರದ ಕ್ರಿಮ್ಸ್‍ನಲ್ಲಿ ಲಸಿಕೆ ವಿತರಿಸಲಾಗುತ್ತದೆ. ಎರಡನೇ ಡೋಸ್ ಲಸಿಕೆ ಪಡೆದ 9 ತಿಂಗಳು ಅಥವಾ 39 ವಾರಗಳನ್ನು ಪೂರೈಸಿರುವವರು ಮಾತ್ರ ಮುನ್ನೆಚ್ಚರಿಕೆ ಡೋಸ್ ಲಸಿಕೆ ಪಡೆಯಲು ಅರ್ಹರಾಗಿದ್ದು, ಈ ಮೊದಲೆರಡು ಡೋಸ್‍ಗಳಲ್ಲಿ ಪಡೆದಿರುವ ಲಸಿಕೆಯನ್ನೇ ಮುನ್ನೆಚ್ಚರಿಕೆ ಡೋಸ್‍ಗಳಾಗಿ ಮತ್ತೆ ನೀಡಲಾಗುತ್ತದೆ. ಹಂತ ಹಂತವಾಗಿ ಲಸಿಕಾಕರಣ ನಡೆಯುತ್ತದೆ ಎಂದು ತಿಳಿಸಿದರು.
    ಈ ರೀತಿ ಎರಡನೇ ಡೋಸ್ ಲಸಿಕೆ ಪಡೆದು 9 ತಿಂಗಳು ಪೂರೈಸಿರುವವರು ಜಿಲ್ಲೆಯಲ್ಲಿ ಸುಮಾರು 20 ಸಾವಿರ ಫಲಾನುಭವಿಗಳ ಪಟ್ಟಿಯನ್ನು ಆರೋಗ್ಯ ಇಲಾಖೆ ತಯಾರಿಸಿದ್ದು, ಅದರಂತೆ ಎಲ್ಲರಿಗೂ ಕರೆ ಮಾಡಿ ಹಾಗೂ ಎಸ್‍ಎಂಎಸ್ ಕಳುಹಿಸುವ ಮೂಲಕ ಮುನ್ನೆಚ್ಚರಿಕೆ ಲಸಿಕೆ ಪಡೆಯುವಂತೆ ಸೂಚನೆ ನೀಡಲಾಗುತ್ತಿದೆ ಎಂದರು.


    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವೈದ್ಯರೂ ಆಗಿರುವ ನಗರಸಭೆ ಅಧ್ಯಕ್ಷ ಡಾ. ನಿತಿನ್ ಪಿಕಳೆ ಇದೇ ವೇಳೆ ಬೂಸ್ಟರ್ ಡೋಸ್ ಪಡೆದರು. ಈ ಸಂದರ್ಭದಲ್ಲಿ ಡಿಎಚ್‍ಒ ಡಾ.ಶರದ್ ನಾಯಕ, ಡಾ.ರಮೇಶ ರಾವ್ ಇದ್ದರು.

    Share This
    300x250 AD
    300x250 AD
    300x250 AD
    Back to top