ಕಾರವಾರ: ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 2021-22ನೇ ಸಾಲಿನ ಸಾಮಾನ್ಯ, ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ಸಾಂಸ್ಕೃತಿಕ ಸಂಘ ಸಂಸ್ಥೆಗಳು ನಡೆಸುವ ಚಟುವಟಿಕೆಗಳಿಗೆ ಧನಸಹಾಯ, ಅಸಂಘಟಿತ ಕಲಾವಿದರಿಗೆ ವಾದ್ಯ ಪರಿಕರ, ವೇಷಭೂಷಣ ಖರೀದಿಗೆ, ಆಸಕ್ತ ಶಿಲ್ಪ, ಚಿತ್ರಕಲಾವಿದರಿಗೆ ಕಲಾಪ್ರದರ್ಶನಕ್ಕೆ ಧನಸಹಾಯ ನೀಡಲು ಸೇವಾಸಿಂಧು ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಜ. 15ರವರೆಗೆ ವಿಸ್ತರಿಸಿದೆ.
ಹೆಚ್ಚಿನ ಮಾಹಿತಿಗಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರವಾರ ಕಛೇರಿ ದೂರವಾಣಿ ಸಂಖ್ಯೆ 08382-227084 ಗೆ ಸಂಪರ್ಕಿಸಬಹುದಾಗಿದೆ ಎಂದು ಸಹಾಯಕ ನಿರ್ದೇಶಕ ಎನ್ ಜಿ ನಾಯ್ಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.