ಮುಂಡಗೋಡ: ಜಿಲ್ಲೆ ಮತ್ತು ತಾಲೂಕು ಮಟ್ಟದಲ್ಲಿ ಸರ್ಕಾರ ಕಾರ್ಯಕ್ರಮ ಹಮ್ಮಿಕೊಂಡಿರುವುದರಿಂದ ಜನಸಾಮಾನ್ಯರಿಗೆ ಅನುಕೂಲವಾಗಿದೆ. ಬಹಳಷ್ಟು ಜನರು ಲಸಿಕೆ ಬಗ್ಗೆ ನಿಷ್ಕಾಳಜಿ ಮಾಡುತ್ತಾರೆ. ತಜ್ಞರ ಸಲಹೆಯಂತೆ ಸರ್ಕಾರ ಸಾಕಷ್ಟು ಮುಂಜಾಗ್ರತೆ ತೆಗೆದುಕೊಂಡಿದೆ ಇದರ ಸದುಪಯೋಗ ಎಲ್ಲರೂ ಪಡೆಯಬೇಕು ಎಂದು ವಾಕರಸಾ ಸಂಸ್ಥೆ ಅಧ್ಯಕ್ಷ ವಿ.ಎಸ್.ಪಾಟೀಲ ಹೇಳಿದರು.
ಅವರು ಪಟ್ಟಣದ ತಾಲೂಕು ಆಸ್ಪತ್ರೆ ಆವರಣದಲ್ಲಿ ಜಿ.ಪಂ., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಸೋಮವಾರ ಆಯೋಜಿಸಿದ್ದ ಆರೋಗ್ಯ ಮತ್ತು ಮುಂಚೂಣಿ ಕಾರ್ಯಕರ್ತರಿಗೆ ಕೋವಿಡ್-19 ಮುನ್ನೆಚ್ಚರಿಕೆ ಡೋಸ್ ಲಸಿಕಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಆರ್ಥಿಕವಾಗಿ ಜನರು ಸುಧಾರಣೆ ಕಂಡುಕೊಳ್ಳಬೇಕು ಆರೋಗ್ಯವಂತರಾಗಿ ಇರಬೇಕು ಎಂಬ ಉದ್ದೇಶದಿಂದ ಸರ್ಕಾರ ಕೋಟಿಗಟ್ಟಲೆ ಖರ್ಚು ಮಾಡಿ ನೀಡುತ್ತಿರುವ ಉಚಿತ ಸೇವೆಯನ್ನು ಸದುಪಯೋಗ ಮಾಡಿಕೊಳ್ಳದೆ ಹೋದರೆ ನಮ್ಮಂಥ ಮೂರ್ಖರು ಯಾರೂ ಇಲ್ಲ ಎಂದರು.
ಎಲ್.ಟಿ.ಪಾಟೀಲ ಮಾತನಾಡಿದರು.
ಪ.ಪಂ.ಅಧ್ಯಕ್ಷೆ ರೇಣುಕಾ ರವಿ ಹಾವೇರಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕೆ.ಎನ್.ಹೆಗಡೆ, ಎಸ್.ಕೆ.ಬೋರಕರ, ಸಿ.ಎಸ್.ಗಾಣಿಗೇರ, ರವಿ ಹಾವೇರಿ, ಬಸವರಾಜ ಕೋಟಿ, ಶಶಿಕಲಾ ಪಾಟೀಲ, ವೈದ್ಯಾಧಿಕಾರಿ ಎಚ್.ಎಫ್.ಇಂಗಳೆ, ಸಿಪಿಐ ಎಸ್.ಎಸ್.ಸಿಮಾನಿ, ಪಿಎಸ್‍ಐ ಬಸವರಾಜ ಮಬನೂರ, ಪ.ಪಂ.ಮುಖ್ಯಾಧಿಕಾರಿ ಮಲ್ಲಯ್ಯ ಹಿರೇಮಠ, ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಎಸ್.ಪಟ್ಟಣಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.