Slide
Slide
Slide
previous arrow
next arrow

ಮ್ಯಾನ್-ಪೋರ್ಟಬಲ್ ಆ್ಯಂಟಿ ಟ್ಯಾಂಕ್ ಗೈಡೆಡ್ ಕ್ಷಿಪಣಿ ಪರೀಕ್ಷೆ ಯಶಸ್ವಿ

300x250 AD

ನವದೆಹಲಿ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರ (DRDO) ಇಂದು ಮ್ಯಾನ್-ಪೋರ್ಟಬಲ್ ಆ್ಯಂಟಿ ಟ್ಯಾಂಕ್ ಗೈಡೆಡ್ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಿಸಿದೆ.

ಸ್ಥಳೀಯವಾಗಿ ಅಭಿವೃದ್ಧಿಪಡಿಸಲಾದ ಈ ಟ್ಯಾಂಕ್ ನಿರೋಧಕ ಕ್ಷಿಪಣಿ ಕಡಿಮೆ ತೂಕದ್ದಾಗಿದ್ದು, ಫೈಯರ್ ಆಂಡ್ ಫಾರ್ಗೆಟ್ ಕ್ಷಿಪಣಿಯಾಗಿದೆ.

ಪರೀಕ್ಷಾರ್ಥ ಹಾರಾಟದ ವೇಳೆ ಕ್ಷಿಪಣಿಯು ಗುರಿಯನ್ನು ಯಶಸ್ವಿಯಾಗಿ ನಾಶಪಡಿಸಿದೆ ಎಂದು ಮೂಲಗಳು ತಿಳಿಸಿವೆ.

300x250 AD

ಸುಧಾರಿತ ತಂತ್ರಜ್ಞಾನ ಆಧಾರಿತ ರಕ್ಷಣಾ ವ್ಯವಸ್ಥೆ ಅಭಿವೃದ್ಧಿಯಲ್ಲಿ ಆತ್ಮನಿರ್ಭರ ಭಾರತದ ಕಡೆಗೆ ಇದು ಪ್ರಮುಖ ಹೆಜ್ಜೆಯಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಹೇಳಿದ್ದಾರೆ.

ಟ್ಯಾಂಕ್ ನಿರೋಧಕ ಕ್ಷಿಪಣಿಯ ಸ್ಥಿರ ಯಶಸ್ವಿ ಪ್ರದರ್ಶನಕ್ಕಾಗಿ ಅವರು ಡಿಆರ್‌ಡಿಓ ಅನ್ನು ಅಭಿನಂದಿಸಿದ್ದಾರೆ. ಡಿಆರ್‌ಡಿಒ ಅಧ್ಯಕ್ಷ ಡಾ.ಜಿ.ಸತೀಶ್ ರೆಡ್ಡಿ ಅವರು ಪರೀಕ್ಷಾ ಸಮಯದಲ್ಲಿ ಕ್ಷಿಪಣಿ ತೋರ್ಪಡಿಸಿದ ಅತ್ಯುತ್ತಮ ಪ್ರದರ್ಶನಕ್ಕಾಗಿ ತಂಡವನ್ನು ಅಭಿನಂದಿಸಿದ್ದಾರೆ.

Share This
300x250 AD
300x250 AD
300x250 AD
Back to top