
ಶಿರಸಿ: ದಿ. ದೀಪಕ್ ಹೊನ್ನಾವರ್ ಅಭಿಮಾನಿ ಬಳಗದ ವತಿಯಿಂದ ಶಿರಸಿಯಲ್ಲಿ ಕಾಂಗ್ರೆಸ್ ಆರೋಗ್ಯ ಸಹಾಯ ಹಸ್ತ ಕಾರ್ಯಕ್ರಮದ ಮೂಲಕ ಶಿರಸಿ-ಸಿದ್ದಾಪುರ ಕ್ಷೇತ್ರದ 5,000 ಬಡ ಕುಟುಂಬಗಳಿಗೆ ಅಗತ್ಯ ವಸ್ತುಗಳ ಕಿಟ್ ಒದಗಿಸುವ ಕಾರ್ಯಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ಬುಧವಾರ ಚಾಲನೆ ನೀಡಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ದಿವಂಗತ ದೀಪಕ್ ಹೊನ್ನಾವರ್ ಅಭಿಮಾನಿ ಬಳಗದ ವತಿಯಿಂದ ಶ್ರೀಮತಿ ಸುಷ್ಮಾ ರಾಜಗೋಪಾಲ್ ತಮ್ಮ ಸ್ವಂತ ಹಣದಿಂದ ಬಡ ಜನರಿಗೆ ಕಿಟ್ ವಿತರಿಸುತ್ತಿರುವುದು ಉತ್ತಮ ವಿಚಾರ. ಯಾವುದೇ ಅಧಿಕಾರದಲ್ಲಿ ಇಲ್ಲದಿದ್ದರೂ ಬಡ ಜನರಿಗೆ ನೆರವಾಗುವ ಮೂಲಕ ಉತ್ತಮ ಕೆಲಸ ಮಾಡುತ್ತಿದ್ದಾರೆಂದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ಆರ್ ವಿ ದೇಶಪಾಂಡೆ, ಕಾರವಾರ ಮಾಜಿ ಶಾಸಕ ಸತೀಶ್ ಸೈಲ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ನಾಯ್ಕ, ಪ್ರಶಾಂತ್ ದೇಶಪಾಂಡೆ, ಯೂಥ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಂತೋಷ ಶೆಟ್ಟಿ ಸೇರಿ ಪಕ್ಷದ ಮುಖಂಡರು ಉಪಸ್ಥಿತರಿದ್ದರು.