ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ ಭಟ್ಟ ಮಾತನಾಡಿ ಸ್ವಾಮಿ ವಿವೇಕಾನಂದರ ಜೀವನ ಚರಿತ್ರೆಯನ್ನು ವಿವರಿಸಿ ಅವರ ಆದರ್ಶಗಳನ್ನು ರೂಢಿಸಿಕೊಳ್ಳಬೇಕು ಎಂದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿನಿಯರು ವಿವೇಕಾನಂದರ ಪ್ರಾರ್ಥನೆಯನ್ನು ನಡೆಸಿಕೊಟ್ಟರು. ಶಾಲೆಯ 10 ನೇ ತರಗತಿ ವಿದ್ಯಾರ್ಥಿಯಾದ ಕುಮಾರ ಶುಭಮ್ ಭಟ್ಟ ಕಾರ್ಯಕ್ರಮವನ್ನು ನಿರ್ವಹಿಸಿದನು.
ಕಾರ್ಯಕ್ರಮದಲ್ಲಿ ಎಲ್ಲ ಶಿಕ್ಷಕ-ಶಿಕ್ಷಕಿಯರು, ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ
