Slide
Slide
Slide
previous arrow
next arrow

ಜ.31 ರಿಂದ ಸಂಸತ್ ಬಜೆಟ್ ಅಧಿವೇಶನ

300x250 AD


ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನವು ಜನವರಿ 31 ರಿಂದ ಆರಂಭವಾಗಲಿದ್ದು, ಫೆ.1 ರಂದು ಬಜೆಟ್ ಮಂಡನೆಯಾಗಲಿದೆ.

ಜನವರಿ 31ರಿಂದ ಉಭಯ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿಗಳ ಭಾಷಣದೊಂದಿಗೆ ಬಜೆಟ್ ಅಧಿವೇಶನವು ಪ್ರಾರಂಭವಾಗುತ್ತದೆ ಮತ್ತು ಏಪ್ರಿಲ್ 8 ರಂದು ಮುಕ್ತಾಯಗೊಳ್ಳಲಿದೆ ಎಂದು ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿಯ ಶಿಫಾರಸನ್ನು ಉಲ್ಲೇಖಿಸಿ ಮೂಲಗಳು ಶುಕ್ರವಾರ ತಿಳಿಸಿವೆ.

ಫೆಬ್ರವರಿ 1 ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್ ಅವರು ಕೇಂದ್ರ ಬಜೆಟ್ ಮಂಡನೆ ಮಾಡಲಿದ್ದಾರೆ. ಅಧಿವೇಶನದ ಮೊದಲ ಭಾಗವು ಫೆಬ್ರವರಿ 11 ರಂದು ಮುಕ್ತಾಯಗೊಳ್ಳಲಿದೆ.

300x250 AD

ಒಂದು ತಿಂಗಳ ಅವಧಿಯ ವಿರಾಮದ ನಂತರ, ಅಧಿವೇಶನದ ಭಾಗ ಎರಡು ಮಾರ್ಚ್ 14 ರಿಂದ ಪ್ರಾರಂಭವಾಗಿ ಏಪ್ರಿಲ್ 8 ರಂದು ಮುಕ್ತಾಯಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.

Share This
300x250 AD
300x250 AD
300x250 AD
Back to top