ಕಾರವಾರ: ಜಿಲ್ಲೆಯಲ್ಲಿ ಶಾಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಲ್ಲಿ ಕೋವಿಡ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ 5 ದಿನಗಳ ಕಾಲ ಕಾರವಾರ ಹಾಗೂ ಹೊನ್ನಾವರ ನಗರದ ಶಾಲೆಗಳನ್ನು ಬಂದ್ ಮಾಡಲಾಗಿದೆ.
ಜನವರಿ 17 ರಿಂದ 22ರವರೆಗೆ 1ರಿಂದ 8 ತರಗತಿಯ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದ್ದು, ಕಾಲೇಜುಗಳಲ್ಲಿ ಶೇಕಡ 50 ರಷ್ಟು ವಿದ್ಯಾರ್ಥಿಗಳು ಹಾಜರಾಗಲು ಆದೇಶ ಹೊರಡಿಸಲಾಗಿದೆ ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.