ಮುಂಡಗೋಡ: ಕೊರೋನಾ ಸಾಂಕ್ರಾಮಿಕ ರೋಗ ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಡಗೋಡ ಗ್ರಾಮದೇವತೆ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವವನ್ನು ಅನಿರ್ದಿಷ್ಟ ಅವಧಿಯವರೆಗೆ ಮುಂದೂಡಲಾಗಿದೆ ಎಂದು ದೇವಸ್ಥಾನ ಕಮಿಟಿ ಸದಸ್ಯರು ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಹಂಚಿಕೊಂಡಿದ್ದಾರೆ.
ಪ್ರತಿ ಮೂರು ವರ್ಷಕ್ಕೊಮ್ಮೆ ನಡೆಯುವ ಜಾತ್ರಾ ಮಹೋತ್ಸವ ಇದೇ ಫೆಬ್ರವರಿ 15 ರಂದು ನಡೆಯಲಿದೆ ಎಂದು ಟ್ರಸ್ಟ್ ಕಮಿಟಿ ಸದಸ್ಯರು ತಿಳಿಸಿದ್ದರು ಆದರೆ ಕೊರೋನಾ ತೀವ್ರವಾಗಿ ಹೆಚ್ಚುತ್ತಿದ್ದು, ಸರ್ಕಾರದ ನಿಯಮಗಳನ್ನು ಪಾಲನೆ ಮಾಡಬೇಕಿರುವುದರಿಂದ ಜಾತ್ರೆಯನ್ನು ಮುಂದೂಡಲಾಗಿದೆ ಎನ್ನಲಾಗಿದೆ.
ಜನವರಿ 25 ರಂದು ಮೊದಲ ಹೊರಬೀಡು ಎಂದು ನಿರ್ಧರಿಸಲಾಗಿತ್ತು ಜಾತ್ರೆ ಮುಂದೂಡಿರುವುದು ಭಕ್ತರಲ್ಲಿ ಬೇಸರ ಮೂಡಿಸಿದೆ.