ಶಿರಸಿ: ನಗರದ ಕಾಲೇಜು ರಸ್ತೆಯಲ್ಲಿರುವ ಪ್ರತಿಷ್ಠಿತ ಖಾಸಗಿ ಪದವಿಪೂರ್ವ ಹಾಗು ಪದವಿ ಕಾಲೇಜುಗಳಲ್ಲಿ ಕೋವಿಡ್ ಸೋಂಕು ಹೆಚ್ಚಾಗಿದ್ದು, ಸುಮಾರು 15 ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಪಾಸಿಟಿವ್ ದೃಡವಾಗಿದೆ ಎನ್ನಲಾಗಿದೆ.
ಈ ಹಿನ್ನಲೆಯಲ್ಲಿ ಜ.19 ರ ವರೆಗೆ ಕಾಲೇಜನ್ನು ಬಂದ್ ಮಾಡಲು ಸ್ಥಳೀಯ ಆಡಳಿತ ನಿರ್ದೇಶನ ನೀಡಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು, ಪಾಲಕರು ಹೆಚ್ಚಿನ ಕಾಳಜಿ ವಹಿಸುವ ಅಗತ್ಯತೆ ಇದೆ.