ತಾಲೂಕಿನ ಸಾಂಬ್ರಾಣಿ ಗ್ರಾಮ ಪಂಚಾಯತ ವ್ಯಾಪ್ತಿಯ ಕರ್ಲಕಟ್ಟಾ ಗ್ರಾಮದಲ್ಲಿರುವ ಪುಣ್ಯಕ್ಷೇತ್ರ ಶ್ರೀ ಶನಿ ಧಾಮಕ್ಕೆ ಶಾಸಕ ಆರ್. ವಿ. ದೇಶಪಾಂಡೆ ಅವರು ಇಂದು ಭೇಟಿ ನೀಡಿ ಕ್ಷೇತ್ರದ ಜನರ ಒಳಿತಿಗಾಗಿ ಪೂಜೆ ಸಲ್ಲಿಸಿ ಅಭಿವೃದ್ಧಿ ಕಾರ್ಯಗಳ ಬಗ್ಗೆ ಸ್ಥಳೀಯ ಮುಖಂಡರ ಜೊತೆ ಸಮಾಲೋಚನೆ ನಡೆಸಿದರು.
ಈ ಸಂದರ್ಭದಲ್ಲಿ ಕರ್ಲಕಟ್ಟಾ ಶನಿಧಾಮದ ಗುರುಗಳಾದ ಮೇಘನಾಥ ಮಹಾರಾಜರು ಹಾಗೂ ಕಾರ್ಯಕರ್ತರು ಮತ್ತು ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.