ಸಿದ್ದಾಪುರ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಉದ್ದೇಶದಲ್ಲೊಂದಾದ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮ ಎಂದರೆ ಮಹಿಳೆಯರನ್ನು ಸಬಲೀಕರಣ ಮಾಡುವುದು. ತಿಳುವಳಿಕೆ, ಶಿಸ್ತು, ಸಮಯ ಪ್ರಜ್ಞೆಯನ್ನು ರೂಢಿಸಿಕೊಳ್ಳುವುದರ ಜತೆಗೆ ವಿವಿಧ ವಿಷಯದ ಕುರಿತು ಮಾಹಿತಿಯನ್ನು ಪಡೆದುಕೊಳ್ಳುವುದಾಗಿದೆ ಎಂದು ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಬಾಬು ನಾಯ್ಕ ಹೇಳಿದರು.
ತಾಲೂಕಿನ ಹಾರ್ಸಿಕಟ್ಟಾ ಗಣೇಶಮಂಟಪದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮಹಿಳಾ ಜ್ಞಾನ ವಿಕಾಸ ಕಾರ್ಯಾಗಾರ ಉದ್ಘಾಟಿಸಿ ಅವರು ಮಂಗಳವಾರ ಮಾತನಾಡಿದರು.
ಮಹಿಳೆಯರಲ್ಲಿ ಇರುವ ವಿವಿಧ ಕೌಶಲವನ್ನು ಹೊರ ಹಾಕಲಿಕ್ಕೆ ಹಾಗೂ ಪ್ರತಿಭೆಯನ್ನು ಅನಾವರಣಗೊಳಿಸುವುದಕ್ಕೆ ಹೆಚ್ಚು ಅವಕಾಶ ಇದೆ ಎಂದು ಹೇಳಿದರು.
ತಾಲೂಕು ಪತ್ರಕರ್ತರ ಸಂಘದ ಕಾರ್ಯದರ್ಶಿ ರಮೇಶ ಹೆಗಡೆ ಹಾರ್ಸಿಮನೆ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಅನೇಕ ಜನಪರ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಅದರ ಉಪಯೋಗವನ್ನು ಸಮರ್ಪಕವಾಗಿ ಪಡೆದುಕೊಂಡು ಆರ್ಥಿಕವಾಗಿ ಸುಧಾರಿಸಿಕೊಳ್ಳಬೇಕೆಂದರು.
ಹಾರ್ಸಿಕಟ್ಟಾ ಒಕ್ಕೂಟದ ಅಧ್ಯಕ್ಷೆ ಶಶಿಕಲಾ ಮಂಜುನಾಥ ಆಚಾರ್ಯ ಅಧ್ಯಕ್ಷತೆವಹಿಸಿದ್ದರು. ತಾಲೂಕು ಯೋಜನಾಧಿಕಾರಿ ಪ್ರಭಾಕರ ನಾಯ್ಕ, ಮೇಲ್ವಿಚಾರಕ ದೇವರಾಜ ಉಪಸ್ಥಿತರಿದ್ದರು. ಮಹಿಳಾ ಜ್ಞಾನವಿಕಾಸ ಕಾರ್ಯರ್ತೆ ಪ್ರಭಾವತಿ, ಚಂದ್ರಮತಿ,ಸವಿತಾ ಗೌಡ ಕಾರ್ಯಕ್ರಮ ನಿರ್ವಹಿಸಿದರು.
ಪ್ರಭಾಕರ ನಾಯ್ಕ, ರಮೇಶ ಹಾರ್ಸಿಮನೆ, ಶಶಿಕಲಾ ಆಚಾರ್ಯ, ಪ್ರಭಾವತಿ, ಚಂದ್ರಮತಿ ಇದ್ದರು.