
ಯಲ್ಲಾಪುರ : ಪಟ್ಟಣದಲ್ಲಿಶನಿವಾರ ಮಾಸ್ಕ್ ಧರಿಸದೇ ಓಡಾಡುತ್ತಿದ್ದವರಿಗೆ ಪಟ್ಟಣ ಪಂಚಾಯತಿ ಸಿಬ್ಬಂದಿಗಳು ದಂಡ ವಿಧಿಸಿ ಎಚ್ಚರಿಕೆ ನೀಡಿದ್ದಾರೆ.
ಲಾಕ್ ಡೌನ್ ತೆರವು ಗೊಂಡರೂ ಸೋಂಕಿನ ಭಯ ಸಂಪೂರ್ಣವಾಗಿ ಕಡಿಮೆಯಾಗದೇ ಇರುವುದರಿಂಡ ಮಾಸ್ಕ್ ಹಾಗೂ ಸಾಮಾಜಿಕ ಅಂತರ ಇತ್ಯಾದಿ ಕೊವಿಡ್ ನಿಯಮಗಳನ್ನು ಪಾಲಿಸುವಂತೆ ಸರ್ಕಾರದ ಆದೇಶವಿದ್ದರೂ ಜನಸಾಮಾನ್ಯರು ಮೈ ಮರೆಯುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ದಂಡ ವಿಧಿಸಿ ಎಚ್ಚರಿಸುವುದು ಅನಿವಾರ್ಯ ವಾಗುತ್ತದೆ ಎಂದು ಹೇಳಿದ್ದಾರೆ.
ಈ ಸಂದರ್ಭದಲ್ಲಿ ಪಟ್ಟಣಪಂಚಾಯತಿಯ ಕಿರಿಯ ಆರೋಗ್ಯ ನಿರೀಕ್ಷಕ ಗುರು ಗಡಗಿ , ಸಿಬ್ಬಂದಿಗಳಾದ ವೆಂಕಟ್ರಮಣ ಶೇಟ್, ಸಂತೋಷ ನಾಯ್ಕ ಮುಂತಾದವರು ಇದ್ದರು.