ಶಿರಸಿ:ಶಿವಗಂಗಾ ಫಾಲ್ಸ್ ನಲ್ಲಿ ಮುಳುಗಿದ್ದ ವಿದ್ಯಾರ್ಥಿಯ ಶವವನ್ನು 16 ತಾಸುಗಳ ಸತತ ಕಾರ್ಯಾಚರಣೆ ನಡೆಸಿ ಬುಧವಾರ ಹೊರ ತೆಗೆಯಲಾಯಿತು.
ಶಿರಸಿಯ ಸರ್ಕಾರಿ ಪದವಿ ಕಾಲೇಜಿನಲ್ಲಿ ಪ್ರಥಮ ವರ್ಷದ ವಾಣಿಜ್ಯ ವಿಭಾಗದಲ್ಲಿ ಓದುತ್ತಿದ್ದ 18 ವರ್ಷದ ಸುಬ್ರಮಣ್ಯ ವಿನಾಯಕ ಹೆಗಡೆ ಎಂಬಾತ ಮಂಗಳವಾರ ಫೋಟೋಶೂಟ್ ಗಾಗಿ ಮೂವರು ಸ್ನೇಹಿತರೊಂದಿಗೆ ತೆರಳಿದ್ದ ವೇಳೆ ಕಾಲು ಜಾರಿ ನೀರಿನಲ್ಲಿ ಮುಳುಗಿದ್ದು, ರಾತ್ರಿಯಿಡೀ ಪೊಲೀಸರು, ಅಗ್ನಿಶಾಮಕ ದಳದವರಿಂದ ಶೋಧ ನಡೆಸಿದರು. ಇಂದು ಬೆಳಿಗ್ಗೆ ಶಿರಸಿ ಗ್ರಾಮೀಣ ಠಾಣೆಯ ಪಿಎಸ್ಐ ಈರಯ್ಯ ಹಾಗೂ ಸಿಬ್ಬಂದಿಗಳು ಸ್ಥಳೀಯ ಈಜುಗಾರರಿಂದ ಯಶಸ್ವಿ ಕಾರ್ಯಾಚರಣೆ ನಡೆಸಿ ಮೃತದೇಹ ಹೊರತೆಗೆದಿದ್ದಾರೆ. ಈ ಘಟನೆಗೆ ಸಂಬಂಧಿಸಿ ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.