ಶಿರಸಿ: ಕದಂಬ ಮಾರ್ಕೆಟಿಂಗ್ ನಲ್ಲಿ ಕೆಎಂಎಫ್ ನ ‘ನಂದಿನಿ’ ಬ್ರ್ಯಾಂಡ್ ಉತ್ಪನ್ನಗಳ ಮಳಿಗೆಯನ್ನು ಪ್ರಾರಂಭಿಸಲಾಗಿದ್ದು, ಜ.20 ರ ಗುರುವಾರ ದಂದು ಬೆಳಿಗ್ಗೆ 11.45 ಕ್ಕೆ ಮಳಿಗೆಯ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಉದ್ಘಾಟಕರಾಗಿ ಕೆಎಂಎಫ್ ಅಧ್ಯಕ್ಷ ಶಂಕರ ಮೊಗದ್ ರವರು ಆಗಮಿಸಲಿದ್ದು, ಮುಖ್ಯ ಅತಿಥಿಗಳಾಗಿ ಕೆಎಂಎಫ್ ನಿರ್ದೇಶಕ ಸುರೇಶ್ಚಂದ್ರ ಹೆಗಡೆ, ವ್ಯವಸ್ಥಾಪಕ ಲೋಹಿತೇಶ್ವರ ಹಾಗೂ ಕದಂಬ ಮಾರ್ಕೆಟಿಂಗ್ ಅಧ್ಯಕ್ಷ ಶಂಭುಲಿಂಗ ಹೆಗಡೆ ಪಾಲ್ಗೊಳ್ಳಲಿದ್ದಾರೆ.