
ಭಟ್ಕಳ: ಮುರುಡೇಶ್ವರದಲ್ಲಿ ಜಾನುವಾರು ಕಳ್ಳತನ ಮಾಡಲು ತಮ್ಮ ಜೊತೆ ಬರಲು ವ್ಯಕ್ತಿ ನಿರಾಕರಿಸಿದ್ದಕ್ಕೆ ಆತನ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ.
ಈ ಸಂಬಂಧ ಮಾವಳ್ಳಿಯ ಬಸ್ತಿಮಕ್ಕಿ ನಿವಾಸಿ ಅಬ್ದುಲ್ ಶೇಖ್ ಪೂಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆರೋಪಿತರನ್ನು ಮೊಹಮದ್ ಇಫ಼್ಜಾಲ್ ಹಾಗೂ ಅಬ್ರಾರ್ ಎಂದು ಗುರುತಿಸಲಾಗಿದೆ.
ಈ ಕುರಿತು ಮುರುಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೋಲಿಸರು ತನಿಖೆ ಕೈಗೊಂಡಿದ್ದಾರೆ.