ಅಂಕೋಲಾ: ಇಲ್ಲಿನ ಅಂಕೋಲಾ- ಅಡ್ಲೂರು ಹೆದ್ದಾರಿಯಲ್ಲಿ ಖಾಸಗಿ ಬಸ್-ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಬಸ್ ಚಾಲಕ-ಕ್ಲೀನರ್ ಗಾಯಗೊಂಡ ಘಟನೆ ಇಂದು ನಡೆದಿದೆ.
ಯಲ್ಲಾಪುರದಿಂದ ಅಂಕೋಲಾ ಕಡೆಗೆ ಬರುತ್ತಿದ್ದ ಖಾಸಗಿ ಬಸ್’ಗೆ ಅಂಕೋಲಾದಿಂದ ಯಲ್ಲಾಪುರ ಕಡೆ ಸಾಗುತ್ತಿದ್ದ ಲಾರಿ ಗುದ್ದಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬಸ್ಸಿನ ಚಾಲಕ ಪುಟ್ಟರಾಜು ಮತ್ತು ಕ್ಲೀನರ ಬಸವರಾಜ ಬೆಳ್ಳಂಕಿ ಕಾಲಿಗೆ ಗಂಭೀರ ಗಾಯಗಳಾಗಿದ್ದು, ಲಾರಿ ಚಾಲಕ ಮಂಜುನಾಥ ಜಾಕಿ ವಿರುದ್ಧ ಅಂಕೋಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.