Slide
Slide
Slide
previous arrow
next arrow

15-18 ವರ್ಷದ ಮಕ್ಕಳಿಗೆ 4 ಕೋಟಿಗೂ ಅಧಿಕ ಲಸಿಕೆ ನೀಡಿಕೆ

300x250 AD

ನವದೆಹಲಿ: ಇದುವರೆಗೆ 19 ದಿನಗಳಲ್ಲಿ 15 ರಿಂದ 18 ವರ್ಷ ವಯಸ್ಸಿನ 4 ಕೋಟಿಗೂ ಹೆಚ್ಚು ಮಕ್ಕಳಿಗೆ ಕೋವಿಡ್-19 ವಿರುದ್ಧ ಲಸಿಕೆ ನೀಡಲಾಗಿದೆ.‌

ಮಕ್ಕಳಿಗೆ ಲಸಿಕೆ ಹಾಕುವ ವೇಗದ ಬಗ್ಗೆ ಸಂತೋಷ ವ್ಯಕ್ತಪಡಿಸಿರುವ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ, ಸಾಂಕ್ರಾಮಿಕ ರೋಗದ ವಿರುದ್ಧದ ರಾಷ್ಟ್ರದ ಹೋರಾಟವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಯುವ ಭಾರತ ಗಣನೀಯ ಕೊಡುಗೆ ನೀಡುತ್ತಿದೆ ಎಂದು ಹೇಳಿದ್ದಾರೆ.

ಜನವರಿ 1 ರಿಂದ CoWIN ಅಪ್ಲಿಕೇಶನ್‌ನಲ್ಲಿ 15-18 ವಯೋಮಾನದ ಮಕ್ಕಳಿಗೆ ಲಸಿಕೆ ನೊಂದಣಿ ಪ್ರಾರಂಭವಾಯಿತು. ಭಾರತ್‌ ಬಯೋಟೆಕ್‌ ನಿರ್ಮಿತ ಕೋವ್ಯಾಕ್ಸಿನ್‌ ಲಸಿಕೆಯನ್ನು ಮಾತ್ರ ಸದ್ಯಕ್ಕೆ ಮಕ್ಕಳಿಗೆ ನೀಡಲಾಗುತ್ತಿದೆ.

300x250 AD

ಇದುವರೆಗಿನ ಭಾರತದ ಒಟ್ಟು ಕೋವಿಡ್-19 ವ್ಯಾಕ್ಸಿನೇಷನ್ ಕವರೇಜ್ 161 ಕೋಟಿ 5 ಲಕ್ಷ ಗಡಿ ದಾಟಿದೆ. ನಿನ್ನೆ ಸಂಜೆ 7 ಗಂಟೆಯವರೆಗೆ 58 ಲಕ್ಷಕ್ಕೂ ಹೆಚ್ಚು ಲಸಿಕೆಗಳನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. 74 ಲಕ್ಷಕ್ಕೂ ಹೆಚ್ಚು ಬೂಸ್ಟರ್ ಡೋಸ್‌ಗಳನ್ನು ಇಲ್ಲಿಯವರೆಗೆ ನೀಡಲಾಗಿದೆ.

Share This
300x250 AD
300x250 AD
300x250 AD
Back to top