ಕುಮಟಾ: ಜಲಜೀವನ ಮಿಷನ್ ಯೋಜನೆಗೆ ಸಂಬಂಧಿಸಿದಂತೆ 2020-21 ಮತ್ತು 22 ನೇಯ ಸಾಲಿನಲ್ಲಿ ತಾಲೂಕಾವಾರು ಕೈಗೆತ್ತಿಕೊಳ್ಳಲಾದ ಕಾಮಗಾರಿಗಳ ಕುರಿತಾದ ಮಾಹಿತಿ ಕಾರ್ಯಗಾರವನ್ನು ಜು.12 ರಂದು 10-30 ಗಂಟೆಗೆ ತಾಲೂಕಾ ಪಂಚಾಯತ ಸಭಾಭವನದಲ್ಲಿ ಆಯೋಜಿಸಲಾಗಿದೆ.
ತಾಲೂಕವಾರು ಜಲಜೀವನ ಮಿಷನ್ ಯೋಜನೆಯಲ್ಲಿ ಕೈಗೆತ್ತಿಕೊಂಡಿರುವ ಕಾಮಗಾರಿಗಳ ಮಾಹಿತಿ ಹಾಗೂ ಕಾಮಗಾರಿಗಳ ಜಲ ಮೂಲ ಸುಸ್ಥಿರತೆ ಬಗ್ಗೆ ವಿಧಾನಸಭಾ ಸದಸ್ಯರು, ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾ.ಪಂ ಅಧ್ಯಕ್ಷರು, ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸ್ಕೊಡ್‌ವೇಸ್ ಸಂಸ್ಥೆಯ ಸಿಬ್ಬಂದಿಗಳು, ಆಯಾ ತಾಲೂಕಿನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು, ಶಾಖಾಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗದವರು ಈ ಕಾರ್ಯಾಗಾರದಲ್ಲಿ ಸಂಪೂರ್ಣ ಮಾಹಿತಿ ನೀಡಲಿದ್ದಾರೆ.
ಶಾಸಕ ದಿನಕರ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಸಭೆಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು, ತಾಲೂಕಿನ ಎಲ್ಲ ಗ್ರಾ.ಪಂಗಳ ಅಧ್ಯಕ್ಷರು, ಅಭಿವೃದ್ಧಿ ಅಧಿಕಾರಿಗಳು ಹಾಜರಿರುವಂತೆ ತಾ.ಪಂ ಪ್ರಕಟಣೆಯಲ್ಲಿ ತಿಳಿಸಿದೆ.