ಕಾರವಾರ: ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಯುವತಿಯೋರ್ವಳು ಸಮದ್ರಕ್ಕೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಕಾರವಾರ ತಾಲೂಕಿನ ಬೈತಖೋಲ್ ನಿವಾಸಿ ಶೃದ್ಧಾ ವೈಂಗಣಕರ್ ಆತ್ಮಹತ್ಯೆ ಮಾಡಿಕೊಂಡ ಯುವತಿ. ಈಕೆಯು “ಜೋಪ್ರೇನಿಯಾ’ ಎಂಬ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದು, ಹಲವು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಜ. 21ರ ರಾತ್ರಿ 11ಗಂಟೆಗೆ ಬೈತ್‌ಖೋಲ್ ಬಂದರಿನ ಸಮೀಪದ ಸಮುದ್ರಕ್ಕೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮೃತ ಯುವತಿಯ ತಾಯಿ ಶಹರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾಳೆ. ಈ ಬಗ್ಗೆ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.