ಕುಮಟಾ: ನಗರದ ಮಣಕಿ ಮೈದಾನ ಆಟೋ ಹಾಗೂ ಈಚರ್ ಲಾರಿ ನಡುವೆ ಅಪಘಾತ ಸಂಭವಿಸಿ ಆಟೋ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಮಣಕಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಈಚರ್ ಲಾರಿ ಹಾಗೂ ಆಟೋ ನಡುವೆ ಸಂಭವಿಸಿದ ಅಪಘಾತದಲ್ಲಿ ಆಟೋ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಸಿದ್ದನಬಾವಿಯ ಬಾಳ ಎಂದು ಗುರುತಿಸಲಾಗಿದೆ. ಗಾಯಗೊಂಡ ಆಟೋ ಚಾಲಕನಿಗೆ ತಾಲೂಕಾಸ್ಪತ್ರೆಯಲ್ಲಿ ಚಿಕಿತ್ಸೆ ಒದಗಿಸಲಾಗಿದೆ.
ಸ್ಥಳಕ್ಕೆ ಕುಮಟಾ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಭೇಟಿ ನೀಡಿ, ಜಖಂಗೊಂಡ ವಾಹನ ತೆರವುಗೊಳಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಈ ಕುರಿತು ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.