ಕುಮಟಾ: ಚಾಲಕನ ನಿಯಂತ್ರಣ ತಪ್ಪಿದ ಗ್ಯಾಸ್ ಟ್ಯಾಂಕರ್ ತಾಲೂಕಿನ ಹೊನ್ಮಾವ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಲ್ಟಿಯಾಗಿದ್ದು, ಸ್ಥಳೀಯರು ಆತಂಕದಿಂದ ಮನೆ ಬಿಟ್ಟು ಹೊರಹೋಗಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ರಾಷ್ಟ್ರೀಯ ಹೆದ್ದಾರಿ ಪಕ್ಕದ ಮನೆಯ ಮುಂಭಾಗದಲ್ಲಿ ಬಿದ್ದಿದೆ. ಗ್ಯಾಸ್ ತುಂಬಿದ್ದ ಹಿನ್ನೆಲೆಯಲ್ಲಿ ಸ್ಥಳೀಯರು ಆತಂಕಕ್ಕೀಡಾಗಿದ್ದು, ಮನೆಯಿಂದ ಕಾಲ್ಕಿತ್ತಿದ್ದಾರೆ.
ಸ್ಥಳಕ್ಕೆ ಕುಮಟಾ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಭೇಟಿ ನೀಡಿ, ಯಾವುದೇ ಅಹಿತಕರ ಘಟನೆ ನಡೆಯದಂತೆ ಹಾಗೂ ಬೆಂಕಿ ತಗುಲದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ.