ಹೊನ್ನಾವರ: ಗಣರಾಜ್ಯೋತ್ಸವದ ನಿಮಿತ್ತ ರಾಷ್ಟ್ರ ಧ್ವಜದ ಗೌರವವನ್ನು ಕಾಪಾಡಲು, ಉಚ್ಚ ನ್ಯಾಯಾಲಯ ಮತ್ತು ರಾಜ್ಯ ಸರ್ಕಾರದ ಆದೇಶದಂತೆ ಯಾವುದೇ ಕಾರಣಕ್ಕೂ ಎಲ್ಲಯೂ ಸಹ ಜಿಲ್ಲೆಯಲ್ಲಿ ಪ್ಲಾಸ್ಟಿಕ್ ರಾಷ್ಟ್ರ ಧ್ವಜದ ಉತ್ಪಾದನೆ ಮತ್ತು ಮಾರಾಟ ಮಾಡದಂತೆ ಕ್ರಮ ತೆಗೆದುಕೊಳ್ಳಬೇಕು. ಯಾರಾದರೂ ಒಮ್ಮೆ ಪ್ಲಾಸ್ಟಿಕ್ ಧ್ವಜ ಮಾರಾಟ ಮಾಡುತ್ತಿದ್ದಲ್ಲಿ, ಧ್ವಜದ ಮಾಸ್ಕ ಧರಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಇಂದು ಹೊನ್ನಾವರದ ತಹಶೀಲ್ದಾರ್ ಮತ್ತು ಹೊನ್ನಾವರ ಪೊಲೀಸ್ ಇನ್ಸ್ಪೆಕ್ಟರ್ ಅವರಿಗೆ ಮನವಿಯನ್ನು ನೀಡಲಾಯಿತು.
ಈ ಸಂಧರ್ಭದಲ್ಲಿ ಶ್ರೀ ನಾಗಭೂಷಣ ನಾಯ್ಕ್ ಹಿಂದೂ ಜನಜಾಗೃತಿ ಸಮಿತಿಯ ಶ್ರೀ ಚಂದ್ರಶೇಖರ ಮೇಸ್ತಾ ಉಪಸ್ಥಿತರಿದ್ದರು.