
ಬೆಂಗಳೂರು: ಕೊರೋನಾ ಮೂರನೇ ಅಲೆ ನಿರ್ವಹಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ರಾಜ್ಯಕ್ಕೆ 1500ಕೋಟಿ ರೂ. ಗಳನ್ನು ನೀಡಿದೆ ಎಂದು ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಕೊರೋನಾ ಮೂರನೇ ಅಲೆಯ ನಿರ್ವಹಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ. ಮೂರನೇ ಅಲೆಯ ನಿಟ್ಟಿನಲ್ಲಿ ಕೇಂದ್ರ ಸರ್ಕಾರ 23 ಸಾವಿರ ಕೋಟಿ ರೂಪಾಯಿ ಮೀಸಲಿಟ್ಟಿದ್ದು, ಇದರಲ್ಲಿ 1500 ಕೋಟಿ ರಾಜ್ಯಕ್ಕೆ ದೊರೆಯಲಿದೆ ಎಂದು ಅವರು ನುಡಿದಿದ್ದಾರೆ.
ಕೊರೋನಾ ಸಾಂಕ್ರಾಮಿಕ ಏರಿಕೆಯಾಗಿದ್ದಾಗ ರಾಜ್ಯದಲ್ಲಿ ಆಸ್ಪತ್ರೆಗಳಲ್ಲಿ ಆರೋಗ್ಯ ಮೂಲಸೌಕರ್ಯಗಳ ಕೊರತೆ ಎದುರಾಗಿತ್ತು. ಈ ಸಂದರ್ಭದಲ್ಲಿ ಖಾಸಗಿ ಆಸ್ಪತ್ರೆಗಳು ನೀಡಿದ ಸಹಕಾರ ಶ್ಲಾಘನೀಯ ಎಂದು ಅವರು ತಿಳಿಸಿದ್ದಾರೆ. ಆರೋಗ್ಯ ಕ್ಷೇತ್ರದಲ್ಲಿ ಕರ್ನಾಟಕವನ್ನು ದೇಶದಲ್ಲೇ ಮಾದರಿ ರಾಜ್ಯವನ್ನಾಗಿಸಲು ಪ್ರಯತ್ನ ನಡೆಯುತ್ತಿದೆ ಎಂದು ಸುಧಾಕರ್ ಹೇಳಿದ್ದಾರೆ.
ನ್ಯೂಸ್ 13