ಶಿರಸಿ: ದೇಶ ಇಂದು ಒಂದಡೆಯಲ್ಲಿ ತೀವ್ರ ಅಭಿವೃದ್ಧಿ ಹೊಂದುತ್ತಿದ್ದರೆ, ಇನೊಂದೆಡೆಯಲ್ಲಿ ಬಡತನ, ನಿರುದ್ಯೋಗ ತಾಂಡವವಾಡುತ್ತಿದೆ. ವಿಜ್ಞಾನ ತಂತ್ರಜ್ಞಾನ ರಂಗದಲ್ಲಿ ಅಪಾರ ಪ್ರಮಾಣದ ಹೊಸ ಹೊಸ ಆವಿಷ್ಕಾರಗಳು ಆಗುತ್ತಿವೆ. ಇಂದಿನ ವಿದ್ಯಾರ್ಥಿಗಳು ಯುವ ಜನಾಂಗ ಇದರ ಪ್ರಯೋಜನ ಪಡೆಯಬೇಕು. ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ವಿದ್ಯಾರ್ಥಿ ಕೇಂದ್ರಿತ ಶಿಕ್ಷಣ ವ್ಯವಸ್ಥೆ ಜಾರಿಗೆ ಬರುತ್ತಿದ್ದು, ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯುವಂತಾಗಬೇಕು ಎಂದು ಎಂ.ಇ.ಎಸ್. ವಾಣಿಜ್ಯ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಟಿ.ಎಸ್.ಹಳೆಮನೆ ಹೇಳಿದರು.
ಅವರು ಗಣರಾಜ್ಯೋತ್ಸವ ದಿನದಂದು ಧ್ವಜಾರೋಹಣ ನೆರವೇರಿಸಿ ಮಾತನಾಡುತ್ತಿದ್ದರು. ಭಾರತದ ಸಂವಿಧಾನ ವಿಶ್ವದಲ್ಲಿಯೇ ಅತಿದೊಡ್ಡ ಲಿಖಿತ ಸಂವಿಧಾನವಾಗಿದೆ. ನಾವೆಲ್ಲರೂ ಸಂವಿಧಾನವನ್ನು ಗೌರವಿಸೋಣ ಇದಕ್ಕಾಗಿ ಬಾಬಾ ಸಾಹೇಬ ಅಂಬೇಡ್ಕರ ಹಾಗೂ ಅವರ ತಂಡ ಈ ಸಂವಿಧಾನ ರಚಿಸಬೇಕಾದರೆ ಅಪಾರ ಶ್ರಮವನ್ನುವಹಿಸಿದ್ದಾರೆ. ಅವರನ್ನು ಈ ಸಂದರ್ಭದಲ್ಲಿ ಗೌರವಿಸೋಣ. ಭಾರತದಲ್ಲಿ ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಅತ್ಯಂತ ಶ್ರೇಷ್ಠ ಆಡಳಿತ ವ್ಯವಸ್ಥೆಯಾಗಿದ್ದು, ಇವು ಉತ್ತಮ ಕೆಲಸವನ್ನು ನಿರ್ವಹಿಸುತ್ತಿವೆ ಎಂದರು.
ಈ ಸಂದರ್ಭದಲ್ಲಿ ಪ್ರಾಧ್ಯಾಪಕರು, ಶಿಕ್ಷಕೇತರ ಸಿಬ್ಬಂದಿಗಳು ಹಾಜರಿದ್ದರು.