ಮುಂಡಗೋಡ: ತಾಲೂಕಿನ ಪಾಳಾ ಗ್ರಾಮದ ಕೆನರಾ ಬ್ಯಾಂಕ್ ಓಣಿಯ ಗಂಗವ್ವ ಇಂಗಳೆ(60) ಎಂಬ ಮಹಿಳೆ ಕ್ರಿಮಿನಾಶಕ ಸೇವಿಸಿ ಆತ್ಮ ಹತ್ಯೆಗೆ ಯತ್ನಿಸಿದವಳು ಚಿಕಿತ್ಸೆ ಫಲಕಾರಿಯಾಗದೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಇವರು ಕಳೆದ 17 ವರ್ಷಗಳಿಂದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದರು. ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಜ.19 ರಂದು ತಮ್ಮ ಮನೆಯಲ್ಲಿ ತಂದು ಇಟ್ಟಿದ್ದ ಅಡಕೆ ಗಿಡಗಳಿಗೆ ಸಿಂಪಡಿಸುವ ಕ್ರಿಮಿನಾಶಕ ಸೇವಿಸಿ ಅಸ್ವಸ್ಥರಾಗಿದ್ದರು. ಪ್ರಾಥಮಿಕ ಚಿಕಿತ್ಸೆ ತಾಲೂಕಾ ಆಸ್ಪತ್ರೆಯಲ್ಲಿ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಚಿಕಿತ್ಸೆ ಫಲಕಾರಿಯಾಗದೆ ಕಿಮ್ಸನಲ್ಲಿ ಮೃತಪಟ್ಟಿರುವುದಾಗಿ ಮೃತಳ ಗಂಡ ಇಂದ್ರಪ್ಪ ಇಂಗಳೆ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.