ಶಿರಸಿ: ಸಿದ್ದಾಪುರ ತಾಲೂಕಿನ ಕಾನಸೂರಿನ ಕಾಳಿಕಾ ಭವಾನಿ ಪ್ರೌಢಶಾಲೆಯ ಮುಖ್ಯಾಧ್ಯಾಪಕರಾದ ಮೀನಾ ಬೋರಕರ್ ರವರು ಧ್ವಜಾರೋಹಣವನ್ನು ನೆರವೇರಿಸಿದರು.ಶ್ರೀ ಕಾಳಿಕಾ ಭವಾನಿ ಕನ್ನಡ ಮಾಧ್ಯಮ ಮತ್ತು ಆಂಗ್ಲ ಮಾಧ್ಯಮ ಪ್ರೌಢಶಾಲೆಗಳ ಎಲ್ಲಾ ಶಿಕ್ಷಕರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.ಕೆಲವು ವಿದ್ಯಾರ್ಥಿಗಳು ಸ್ವ ಇಚ್ಛೆಯಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು . ಕೋವಿಡ್ ನಿಯಮಗಳಿಗೆ ಅನುಗುಣವಾಗಿ ಸರಳವಾಗಿ ಆಚರಣೆ ಮಾಡಲಾಯಿತು. ಪರಿವರ್ತನಾ ಟೀಮ್ ವತಿಯಿಂದ ಸಿಹಿಯನ್ನು ವಿತರಿಸಲಾಯಿತು.
ಕಾಳಿಕಾ ಭವಾನಿ ಪ್ರೌಢಶಾಲೆಯಲ್ಲಿ 73 ನೇ ಗಣರಾಜ್ಯೋತ್ಸವ ಆಚರಣೆ
