ಕಾರವಾರ: ನಗರದ ಶಾಸಕರ ಕಚೇರಿಯಲ್ಲಿ ಬುಧವಾರ 73 ನೆಯ ಗಣರಾಜ್ಯೋತ್ಸವ ಆಚರಿಸಲಾಯಿತು. ಅನಾರೋಗ್ಯದಿಂದ ಶಾಸಕಿ ರೂಪಾಲಿ ನಾಯ್ಕ ಅನುಪಸ್ಥಿತರಿದ್ದು, ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ ಧ್ವಜಾರೋಹಣ ನೆರವೇರಿಸಿದರು.
ನಂತರ ಮಾತನಾಡಿದ ಅವರು, ವಿಶ್ವದಲ್ಲಿಯೇ ಅನೇಕ ಭಾಷೆ, ಧರ್ಮ, ಜಾತಿ, ಪ್ರಾಂತ್ಯಗಳಿಂದ ಕೂಡಿರುವ, ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ರಾಷ್ಟ್ರ ನಮ್ಮ ದೇಶ. ಈಕ್ಯತೆ ಮತ್ತು ಸಮಗ್ರತೆ ಕಾಪಾಡಿಕೊಳ್ಳುವ ಮೂಲಕ ಭಾರತ ಸಮೃದ್ಧ ರಾಷ್ಟ್ರವಾಗಿ ಬೆಳೆದು ನಿಂತಿದೆ. ಭವ್ಯ ಭಾರತವನ್ನು ಅಖಂಡ ರಾಷ್ಟ್ರವನ್ನಾಗಿಸಿ ರೂಪಿಸುವಲ್ಲಿ ನಾವೆಲ್ಲರೂ ಯಶಸ್ವಿಯಾಗಿದ್ದೇವೆ ಎಂದು ಹೆಮ್ಮೆಯಿಂದ ಹೇಳಬಹುದಾಗಿದೆ ಎಂದರು.
ಅನಾರೋಗ್ಯದ ಕಾರಣದಿಂದ ಶಾಸಕಿ ರೂಪಾಲಿ ನಾಯ್ಕ ಗೈರು ಹಾಜರಾಗಿದ್ದರು. ಈ ಸಂದರ್ಭದಲ್ಲಿ ನಗರಸಭಾ ಅಧ್ಯಕ್ಷ ಡಾ. ನಿತಿನ್ ಪಿಕಳೆ, ನಗರಸಭಾ ಸದಸ್ಯರು, ತಾ.ಪಂ ಅಧಿಕಾರಿಗಳು ಸೇರಿದಂತೆ ಪಕ್ಷದ ಮುಖಂಡರು ಹಾಗೂ ಹಲವಾರು ಕಾರ್ಯಕರ್ತರಿದ್ದರು.