ಮುಂಡಗೋಡ: ಹೆಣ್ಣು ಮಕ್ಕಳಿಗೆ ರಕ್ಷಣೆ ನೀಡುವುದರ ಜೊತೆಗೆ ಹೆಣ್ಣು ಮಕ್ಕಳು ಸಮಾಜದಲ್ಲಿ ಅನುಭವಿಸುವ ತೊಂದರೆಗಳ ಬಗ್ಗೆ ಅರಿವು ಮೂಡಿಸುವ ಉದೇಶದಿಂದ ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ ಆಚರಿಸಲಾಗುತ್ತದೆ ಎಂದು ಪ್ರಭಾರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ದೀಪಾ ಬಂಗೇರ ಹೇಳಿದರು.
ಅವರು ಹುನಗುಂದ ಗ್ರಾಮದ ಪ್ರೌಢ ಶಾಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಅಂಗವಾಗಿ ಶಾಲಾ ಮಕ್ಕಳಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆ, ಪೋಕ್ಸೋ ಕಾಯ್ದೆ, ಮಹಿಳೆ ಮತ್ತು ಮಕ್ಕಳ ಅನೈತಿಕ ಸಾಗಣೆಕೆ ತಡೆಗಟ್ಟುವ ಕುರಿತು ಅರಿವು ಮೂಡಿಸುವ ತಾಲೂಕಾ ಮಟ್ಟದ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.
ಬಾಲ್ಯ ವಿವಾಹ ನಿಷೇಧ, ಪೋಕ್ಸೋ ಕಾಯ್ದೆ, ಮಹಿಳೆ ಮತ್ತು ಮಕ್ಕಳ ಸಾಗಣೆ ತಡೆ ಕುರಿತು ಮಾಡಬಹುದಾದ ಕ್ರಮಗಳ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸಿದರು. ಹಾಗೂ ಬಾಲ್ಯ ವಿವಾಹ ನಡೆಯುತ್ತಿದ್ದಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಕ್ಕೆ ಕರೆ ಮಾಡಿ ಮಾಹಿತಿ ಒದಗಿಸಬೇಕು ಅಂತರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಎಂದರೆ ಹೆಣ್ಣಿನ ಸುರಕ್ಷಿತೆ ಶಿಕ್ಷಣದ ಕುರಿತು ಅರಿವು ಮೂಡಿಸುವ ಹಾಗೂ ಅವರ ಭದ್ರತೆಗೆ ಸಂಕಲ್ಪ ತೊಡುವ ದಿನ ಎಂದರು.
ಕಾರ್ಯಕ್ರಮದ ಉದ್ಘಾಟನೆ ಮಾಡಿ ಮಾತನಾಡಿದ ಹುನಗುಂದ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಯಲ್ಲಮ್ಮಾ ಆರ್.ಇಟ್ಲಾಪುರ, ಇತಿಹಾಸ ಕಾಲದಲ್ಲಿ ಮಹಿಳೆಯರು ಹಾಗೂ ಹೆಣ್ಣು ಮಕ್ಕಳ ಸ್ಥಾನಮಾನದ ಬಗ್ಗೆ ಹಾಗೂ ಸ್ವತಂತ್ರ ಪೂರ್ವ ಮತ್ತು ಸ್ವತಂತ್ರ ನಂತರ ಹೆಣ್ಣು ಮಕ್ಕಳ ಶಿಕ್ಷಣ ಸ್ಥಾನಮಾನಗಳಲ್ಲಿ ಆದ ಬದಲಾವಣೆಗಳ ಕುರಿತು ಮಹಿಳೆಯರಿಗಾಗಿ ಶ್ರಮಿಸಿದ ಸಾಧಕರ ಬಗ್ಗೆ ಮಾಹಿತಿಯನ್ನು ತಿಳಿಸಿದರು.
ಶಾಲಾ ಮುಖ್ಯೋಪಾಧ್ಯಾಯರಾದ ಅಕ್ಕಮ್ಮಾ ಗಾಣಗೇರ ಮಾತನಾಡಿ, ಹೆಣ್ಣು ಮಕ್ಕಳ ಭ್ರೂಣ ಹತ್ಯೆ, ಲಿಂಗ ತಾರತಮ್ಯ ಕುರಿತು ಮಾಹಿತಿಯನ್ನು ತಿಳಿಸಿದರು.
ಈ ಸಂದರ್ಭದಲ್ಲಿ ಪ್ರೌಡ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ವಿವಿಧ ಇಲಾಖೆಗಳ ಅಧಿಕಾರಿಗಳು, ವಲಯ ಮೇಲ್ವಿಚಾರಕಿ ಫಾತೀಮಾ ಕಿತ್ತೂರ ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳು ಹಾಜರಿದ್ದರು. ರಮೇಶ ಅಂಬಿಗೇರ, ನಿರೂಪಿಸಿದರು. ಕಿಡ್ಸ ಸಂಸ್ಥೆಯ ವಿಶಾಲಾಕ್ಷಿ. ಎಸ್.ರಾಣಗೇರ, ವಂದನಾರ್ಪಣೆ ಮಾಡಿದರು.