ಮುಂಡಗೋಡ: ದೇಶದ ವಿವಿಧ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಬೇಕಾದರೆ, ಪ್ರತಿಯೋಬ್ಬರು ತಮ್ಮ ಜವಾಬ್ದಾರಿ ಅರಿತುಕೊಂಡು ಕೆಲಸ ಮಾಡಿದರೆ ಮಾತ್ರ ಸಾಧ್ಯ ಎಂದು ತಹಸೀಲ್ದಾರ್ ಶ್ರೀಧರ ಮುಂದಲಮನಿ ಹೇಳಿದರು.
ಅವರು ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ 73ನೇ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಭಾರತದ ಪ್ರಜೆಗಳನ್ನು ಆಳುವ ಶಾಸಕಾಂಗ, ನ್ಯಾಯ ಒದಗಿಸುವ ನ್ಯಾಯಾಂಗ ಹಾಗೂ ಪ್ರಜೆಗಳಿಗೆ ಕೆಲಸ ಮಾಡುವ ಕಾರ್ಯಾಂಗಗಳು ಹೇಗಿರಬೇಕು. ಯಾವ ನೀತಿ ನಿಯಮಗಳನ್ನು ಪಾಲಿಸಬೇಕು ಎಂಬ ಸೂಚನೆಗಳನ್ನು ಹಾಕಿಕೊಟ್ಟ ಸಮಗ್ರ ಮಾಹಿತಿ ಗುಚ್ಛವೆ ನಮ್ಮ ಸಂವಿಧಾನ. 25 ಭಾಗಗಳಲ್ಲಿ 448 ಕಲಂಗಳನ್ನು ಹಾಗೂ 12 ವಿಧಿಗಳನ್ನು ಹೊಂದಿದ ಬೃಹತ್ ಗ್ರಂಥ ನಮ್ಮ ಸಂವಿಧಾನ. ಮಹಾತ್ಮಗಾಂಧಿ, ಜವಹರಲಾಲ್ ನೆಹರು, ಬಾಲಗಂಗಾಧರ ತಿಲಕ್ ಭಗತ್‍ಸಿಂಗ್ ಹೀಗೆ ಲಕ್ಷಾಂತರ ಹೋರಾಟಗಾರರ ತ್ಯಾಗ ಬಲಿದಾನಗಳ ನಂತರ ನಮ್ಮ ದೇಶ 1947ರಲ್ಲಿ ಸ್ವತಂತ್ರವಾಯಿತು ಎಂದರು.
ಕೆಡಿಸಿಸಿ ಬ್ಯಾಂಕಿನ ನಿರ್ದೇಶಕ ಎಲ್.ಟಿ.ಪಾಟೀಲ, ಪ.ಪಂ.ಅಧ್ಯಕ್ಷೆ ರೇಣುಕಾ ರವಿ ಹಾವೇರಿ, ತಾ.ಪಂ.ಇಒ ಪ್ರವೀಣ್ ಕಟ್ಟಿ, ಬಿಇಒ ವಿ.ವಿ.ನಡುವಿನಮನಿ, ಸಮಾಜ ಕಲ್ಯಾಣ ಅಧಿಕಾರಿ ಗೋಪಾಲಕೃಷ್ಣ ಡಿ, ಸಹಾಯಕ ಕೃಷಿ ನಿರ್ದೆಶಕ ಎಂ.ಎಸ್.ಕುಲಕರ್ಣಿ, ಇಲಾಖೆ ಅಧಿಕಾರಿಗಳು, ಸಿಬ್ಬಂದಿ, ಜನಪ್ರತಿನಿಧಿಗಳು ಹಾಗೂ ವಿವಿಧ ಸಂಘದ ಮುಖಂಡರು ಉಪಸ್ಥಿತರಿದ್ದರು.