ಕಾರವಾರ: ಜಿಲ್ಲೆಯಲ್ಲಿ 18 ವರ್ಷ ಮೇಲ್ಪಟ್ಟ 10,77,505 ಫಲಾನುಭವಿಗಳಿಗೆ ಮೊದಲನೇ ಡೋಸ್ ಹಾಗೂ 9,40,517 ಫಲಾನುಭವಿಗಳಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಮುಲೈ ಮುಗಿಲನ್ ತಿಳಿಸಿದ್ದಾರೆ.
ಗುರುವಾರ ತಮ್ಮ ಕಚೇರಿಯಲ್ಲಿ ಕೋವಿಡ್ ಲಸಿಕಾಕರಣದ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳು, ಸಹಾಯಕ ಆಯುಕ್ತರು, ತಹಶೀಲ್ದಾರರು, ತಾಲೂಕಾ ಪಂಚಾಯತ ಮುಖ್ಯ ಕಾರ್ಯರ್ವಾಹಕ ಅಧಿಕಾರಿಗಳು ಹಾಗೂ ತಾಲೂಕಾ ಆರೋಗ್ಯಾಧಿಕಾರಿಗಳ ಜೊತೆ ಸಭೆ ನಡೆಸಿ, ಮಾಹಿತಿ ನೀಡಿದರು. 15 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಈಗಾಗಲೇ ಕೋವಿಡ್ ಲಸಿಕಾಕರಣ ಪ್ರಾರಂಭಿಸಲಾಗಿದ್ದು, ಜಿಲ್ಲೆಯಲ್ಲಿ ಈ ವಯಸ್ಸಿನ ಒಟ್ಟೂ ಮಕ್ಕಳ ಪೈಕಿ 54,796 ಮಕ್ಕಳಿಗೆ ಮೊದಲನೇ ಡೋಸ್ ಲಸಿಕೆಯನ್ನು ನೀಡಲಾಗಿದೆ. ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷ ಮೇಲ್ಪಟ್ಟ ಸ್ವಅಸ್ವಸ್ಥತೆ ಹೊಂದಿರುವ ನಾಗರಿಕರಿಗೆ ಮುನ್ನೆಚ್ಚರಿಕಾ ಡೋಸ್ ಕೋವಿಡ್ ಲಸಿಕಾಕರಣ ಪ್ರಾರಂಭಿಸಲಾಗಿದೆ. ಇದುವರೆಗೆ 8274 ಆರೋಗ್ಯ ಕಾರ್ಯಕರ್ತರು, 2728 ಮುಂಚೂಣಿ ಕಾರ್ಯಕರ್ತರು ಹಾಗೂ 7001 60 ವರ್ಷ ಮೇಲ್ಪಟ್ಟ ಸ್ವಅಸ್ವಸ್ಥತೆ ಹೊಂದಿರುವ ನಾಗರಿಕರಿಗೆ ಮುನ್ನೆಚ್ಚರಿಕಾ ಡೋಸ್ ಲಸಿಕಾಕರಣ ಮಾಡಲಾಗಿದೆ ಎಂದರು.
ಪ್ರಸ್ತುತ ಜಿಲ್ಲೆಯಲ್ಲಿ 71,975 ಫಲಾನುಭವಿಗಳು 2 ನೇ ಡೋಸ್ ಲಸಿಕೆಯ ಅರ್ಹ ಅವಧಿಯನ್ನು ಪೂರೈಸಿರುತ್ತಾರೆ ಹಾಗೂ 12,444 ಸ್ವಅಸ್ವಸ್ಥತೆ ಹೊಂದಿರುವ ನಾಗರಿಕರು, 1642 ಮುಂಚೂಣಿ ಕಾರ್ಯಕರ್ತರು ಮತ್ತು 3633 ಆರೋಗ್ಯ ಕಾರ್ಯಕರ್ತರು ಮುನ್ನೆಚ್ಚರಿಕಾ ಡೋಸ್ ಪಡೆಯಲು ಬಾಕಿ ಇದ್ದು, ಇವರೆಲ್ಲರಿಗೂ ಜ.28ಹಾಗೂ 29ರಂದು ವಿಶೇಷ ಲಸಿಕಾ ಮೇಳಗಳನ್ನು ನಡೆಸಿ ಲಸಿಕಾಕರಣ ಮಾಡಲು ಉದ್ದೇಶಿಸಲಾಗಿದೆ. ಲಸಿಕೆಯನ್ನು ಪಡೆಯಲು ಅರ್ಹ ಫಲಾನುಭವಿಗಳು ತಮ್ಮ ಸಮೀಪದ ಲಸಿಕಾ ಕೇಂದ್ರಕ್ಕೆ ತೆರಳಿ ಲಸಿಕೆಯನ್ನು ಪಡೆದು ಕೋವಿಡ್-19 ಸಾಂಕ್ರಾಮಿಕದಿಂದ ಉಂಟಾಗಬಹುದಾದ ತೊಂದರೆಗಳಿಂದ ರಕ್ಷಿಸಿಕೊಳ್ಳಲು ಜಿಲ್ಲಾಧಿಕಾರಿ ವಿನಂತಿಸಿದ್ದಾರೆ.