ಶಿರಸಿ: ಅಕ್ರಮವಾಗಿ 1.5 ಕ್ವಿಂಟಲ್ ದನದ ಮಾಂಸ ಸಾಗಾಟ ವೇಳೆ ಶಿರಸಿ ಪೊಲೀಸರು ದಿಢೀರ್ ದಾಳಿ ನಡೆಸಿ ಮೂವರ ಆರೋಪಿಗಳನ್ನು ಬಂಧಿಸಿದ್ದಾರೆ.
ಹಾವೇರಿ ಜಿಲ್ಲೆಯ ಅಕ್ಕಿ ಆಲೂರಿನವರು ಬಂಧಿತ ಆರೋಪಿಗಳಾಗಿದ್ದಾರೆ. ಅಕ್ರಮವಾಗಿ ದನದ ಮಾಂಸ ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಪೊಲೀಸರು ಆರೋಪಿಗಳಿಂದ ದನದ ಮಾಂಸ ಹಾಗೂ ಸಾಗಾಣಿಕೆ ಮಾಡಲು ಬಳಸಿದ್ದ ವಾಹನ ವಶಕ್ಕೆ ಪಡೆದುಕೊಂಡಿದ್ದಾರೆ.
ಕಾರ್ಯಾಚರಣೆಯಲ್ಲಿ ಶಿರಸಿ ಮಾರುಕಟ್ಟೆ ಸಿ .ಪಿ .ಐ. ರಾಮಚಂದ್ರ ನಾಯಕ್ ನೇತೃತ್ವದಲ್ಲಿ ಪಿ. ಎಸ್ .ಐ . ಭೀಮ ಶಂಕರ್ ಧಿಡೀರ್ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ ಈ ಕುರಿತು ಶಿರಸಿ ಹೊಸ ಮಾರುಕಟ್ಟೆ ಪೆÇೀಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.