ನವದೆಹಲಿ: ಏರ್ ಇಂಡಿಯಾ ಕಂಪನಿಯನ್ನು ಇಂದು ಅಧಿಕೃತವಾಗಿ ಸರ್ಕಾರ ಟಾಟಾ ಸಮೂಹಕ್ಕೆ ಹಸ್ತಾಂತರ ಮಾಡಿದೆ.
ಟಾಟಾ ಸನ್ಸ್ ಅಧ್ಯಕ್ಷ ಎನ್. ಚಂದ್ರಶೇಖರ್ ಅವರು ಪ್ರಧಾನಿ ಮೋದಿ ಅವರನ್ನು ಈ ಸಂಬಂಧ ಇಂದು ಭೇಟಿ ಮಾಡಿದ್ದಾರೆ. ಈ ಭೇಟಿಯ ಫೋಟೋವನ್ನು ಪ್ರಧಾನಿ ಕಾರ್ಯಾಲಯ ಟ್ವಿಟರ್ ಮೂಲಕ ಹಂಚಿಕೊಂಡಿದೆ.
ಅಕ್ಟೋಬರ್ 8ರಂದು ಏರ್ ಇಂಡಿಯಾ ಕಂಪನಿಯನ್ನು ಟಾಟಾ ಸಮೂಹಕ್ಕೆ ಹಸ್ತಾಂತರಿಸುವ ಒಪ್ಪಂದಕ್ಕೆ ಸಹಿ ಹಾಕಲಾಗಿತ್ತು. ಅಕ್ಟೋಬರ್ 11ರಂದು ಕೇಂದ್ರ ಸರಕಾರ ಈ ಕಂಪನಿಯನ್ನು 18 ಸಾವಿರ ಕೋಟಿಗೆ ಮಾರಾಟ ಮಾಡಿದ ಪತ್ರವನ್ನು ಟಾಟಾ ಸಮೂಹಕ್ಕೆ ನೀಡಿದೆ.
ಅಕ್ಟೋಬರ್ 25ರಂದು ಕೇಂದ್ರ ಸರ್ಕಾರ ಮತ್ತು ಟಾಟಾ ಸನ್ಸ್ ಷೇರು ಖರೀದಿ ಒಪ್ಪಂದಕ್ಕೆ ಸಹಿ ಹಾಕಿದವು.