ಮುಂಡಗೋಡ: ಸರಕಾರಿ ಆಸ್ಪತ್ರೆಗೆ ಹೋಗಿ ಬರುವುದಾಗಿ ಹೇಳಿ ಹೋದ ಮಹಿಳೆಯೊಬ್ಬಳು ಮರಳಿ ಮನೆಗೆ ಬಾರದೆ ನಾಪತ್ತೆಯಾದ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ತಾಲೂಕಿನ ಪಾಳಾ ಹೊಸನಗರ ನಿವಾಸಿ 29 ವರ್ಷದ ಸ್ನೇಹಾ ಗಣಪತಿ ಭೋವಿವಡ್ಡರ ನಾಪತ್ತೆಯಾದ ಮಹಿಳೆಯಾಗಿದ್ದಾಳೆ. ಜ. 25ರಂದು ಮಧ್ಯಾಹ್ನ ಸರಕಾರಿ ಆಸ್ಪತ್ರೆಗೆ ಹೋಗಿ ಬರುತ್ತೇನೆಂದು ಹೇಳಿ ಹೋದವಳು ಮರಳಿ ಇದುವರೆಗೂ ಮನೆಗೆ ಬಾರದೆ ನಾಪತ್ತೆಯಾಗಿದ್ದು ಹಲವಾರು ಕಡೆಗಳಲ್ಲಿ ಹುಡುಕಿದರು ಸಹ ಪತ್ತೆಯಾಗಿಲ್ಲ. ನನ್ನ ಹೆಂಡತಿಯನ್ನು ಹುಡುಕಿ ಕೊಡುವಂತೆ ಪತಿ ಗಣಪತಿ ಪೊಲೀಸ್ ದೂರು ನೀಡಿದ್ದು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.