ಕಾರವಾರ:ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ‘ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆ’ ಅಡಿಯಲ್ಲಿ ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ/ಯುವತಿಯರಿಗೆ ಉದ್ಯೋಗ ಅವಕಾಶಗಳನ್ನು ಕಲ್ಪಿಸುವ ಸಲುವಾಗಿ ಹುಬ್ಬಳ್ಳಿ ಮತ್ತು ಧಾರವಾಡದಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರಗಳಲ್ಲಿ (ಜಿಟಿಟಿಸಿ) ಉಚಿತ ತಾಂತ್ರಿಕ ಕೌಶಲ್ಯ ತರಬೇತಿಗಳನ್ನು ಆಯೋಜಿಸಲಾಗಿರುತ್ತದೆ.
ತರಬೇತಿಗಳು ಫೆ.10 ರಿಂದ ಪ್ರಾರಂಭವಾಗಲಿದ್ದು, ಆಸಕ್ತ ಅಭ್ಯರ್ಥಿಗಳು ಫೆ. 8 ರೊಳಗಾಗಿ ಅರ್ಜಿ ಸಲ್ಲಿಸಬೆಕು. ಎಸ್‍ಎಸ್‍ಎಲ್‍ಸಿ/ಐಟಿಐ/ಡಿಪ್ಲೋಮಾ/ಬಿ.ಇ ಪಾಸಾದ 16 ರಿಂದ 40 ವಯೋಮಿತಿಯೊಳಗಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಈ ತರಬೇತಿಗಳನ್ನು ಪಡೆಯಲು ಅರ್ಹರಿದ್ದು, ತರಬೇತಿ ವೇಳೆಯಲ್ಲಿ ಅಭ್ಯರ್ಥಿಗಳಿಗೆ ಸ್ಟೈಪೆಂಡ್ ಮತ್ತು ಬಸ್ ಪಾಸ್ ಸೌಲಭ್ಯ ಇರುತ್ತದೆ.
ಜಿಟಿಟಿಸಿ ಸಂಸ್ಥೆಯು ಉನ್ನತ ತಂತ್ರಜ್ಞಾನ ಮತ್ತು ಸೌಕರ್ಯಗಳನ್ನು ಅಳವಡಿಸಿಕೊಂಡಿದ್ದು, ಕೈಗಾರಿಕೆಗಳಲ್ಲಿ ಅನುಭವ ಹೊಂದಿದ ತಂತ್ರಜ್ಞರಿಂದ ಆನ್ ಜಾಬ್ ತರಬೇತಿ ನೀಡಲಾಗುವುದು. ಈ ತರಬೇತಿಗಳು ಕೈಗಾರಿಕೆಗಳಲ್ಲಿ ನೇರವಾಗಿ ಕೆಲಸ ಮಾಡಲು ಅನುಕೂಲವಾಗುವಂತೆ ಪಠ್ಯಕ್ರಮ ಹೊಂದಿವೆ. ತರಬೇತಿ ಪಡೆದ ಅಭ್ಯರ್ಥಿಗಳಿಗೆ ಪ್ರತಿಷ್ಠಿತ ಕೈಗಾರಿಕೆಗಳಲ್ಲಿ ಉದ್ಯೋಗ ದೊರಕಿಸಿಕೊಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಜಿಟಿಟಿಸಿ, ಕೈಗಾರಿಕಾ ವಸಾಹತು, ಗೋಕುಲ ರಸ್ತೆ, ಹುಬ್ಬಳ್ಳಿ. ದೂರವಾಣಿ sಸಂಖ್ಯೆ 0836-2333159, 8183860552, ಅಥವಾ ಜಿಟಿಟಿಸಿ, ಕೆ.ಐ.ಎ.ಡಿ.ಬಿ ಕೈಗಾರಿಕಾ ಪ್ರದೇಶ, ರಾಯಾಪುರ, ಧಾರವಾಡ, ಮೊಬೈಲ್ ಸಂಖ್ಯೆ 9591491810 ಎಂದು ಸಂಸ್ಥೆಯ ಪ್ರಾಂಶುಪಾಲ್ ಮಾರುತಿ ಭಜಂತ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.