
ಯಲ್ಲಾಪುರ: ಮಂಚಿಕೇರಿಯಲ್ಲಿ ‘ರೈತ ಸಂಪರ್ಕ ಕೇಂದ್ರ’ ನೂತನ ಕಟ್ಟಡವನ್ನು ಕಾರ್ಮಿಕ ಖಾತೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಉದ್ಘಾಟಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ನಂತರ ರೈತ ಸಂಪರ್ಕ ಕೇಂದ್ರದ ಆವರಣದಲ್ಲಿ ಕೃಷಿ ಇಲಾಖೆಯ 2021 ನೇ ಸಾಲಿನ ಕೃಷಿ ಅಭಿಯಾನದ ರಥಕ್ಕೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪಂಚಾಯತ ರಾಜ್ಯ ವಿಕೇಂದ್ರೀಕರಣ ಸಮಿತಿಯ ಉಪಾಧ್ಯಕ್ಷರಾದ ಶ್ರೀ ಪ್ರಮೋದ ಹೆಗಡೆ, ಗ್ರಾಮ ಪಂಚಾಯತ ಅಧ್ಯಕ್ಷ ವಿನಾಯಕ ನಾಯ್ಕ, ಉಪಾಧ್ಯಕ್ಷ ರಂಜನಾ ಆಚಾರಿ, ಜಿಲ್ಲಾ ಪಂಚಾಯತ ಮಾಜಿ ಸದಸ್ಯೆ ರೂಪಾ ಬೂರ್ನಮನೆ, ತಾಲೂಕಾ ಪಂಚಾಯತ ಮಾಜಿ ಉಪಾಧ್ಯಕ್ಷ ಸುಜಾತಾ ಸಿದ್ದಿ, ಸದಸ್ಯೆ ರಾಧಾ ಹೆಗಡೆ ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳು ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.