ಹೊನ್ನಾವರ: ತಾಲೂಕಿನ ಅಪ್ಸರಕೊಂಡ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ.
ರಾಷ್ಟ್ರೀಯ ಹೆದ್ದಾರಿಯ ದುರ್ಗಾಂಬಾ ಹೋಟೆಲ್ ಬಳಿ ಬೈಕ್ ಸವಾರ ತನ್ನ ಮಾರ್ಗದಲ್ಲಿ ಹೊನ್ನಾವರ ಕಡೆಗೆ ತೆರಳುತ್ತಿದ ವೇಳೆ ಕಾಸರಕೋಡ ಪೆಟ್ರೋಲ್ ಪಂಪ್ ಕಡೆಯಿಂದ ಭಟ್ಕಳ ಕಡೆಗೆ ರಾಂಗ್ ರೂಟ್ ನಲ್ಲಿ ಬಂದ ಲಾರಿ ಚಾಲಕ ಬೈಕ್ ಗೆ ಗುದ್ದಿದ ಪರಿಣಾಮ, ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾನೆ.
ಗಾಯಗೋಂಡ ಬೈಕ್ ಸವಾರನನ್ನು ಸ್ಥಳೀಯರ ಸಹಕಾರದಿಂದ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗಿದೆ. ಲಾರಿ ಚಾಲಕನ ನಿರ್ಲಕ್ಷತನದ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.