• Slide
    Slide
    Slide
    previous arrow
    next arrow
  • SSLC ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ

    300x250 AD
    ಸಾಂದರ್ಭಿಕ ಚಿತ್ರ

    ಬೆಂಗಳೂರು: ಕೊರೋನಾ ಕಾರಣದಿಂದ ಕರ್ನಾಟಕದಲ್ಲಿ ವಿಳಂಬವಾಗಿರುವ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಜುಲೈ.19 ಹಾಗೂ 22ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಉಚಿತವಾಗಿ ಬಸ್‍ನಲ್ಲಿ ಸಂಚರಿಸಲು ಕೆಎಸ್‍ಆರ್‍ಟಿಸಿ, ಬಿಎಂಟಿಸಿ ಅವಕಾಶ ನೀಡಿದೆ.
    ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬಗ್ಗೆ ಮಹತ್ವದ ಸೂಚನೆ ಕೊಟ್ಟ ಹೈಕೋರ್ಟ್ ಪರೀಕ್ಷೆಯ ದಿನಗಳಂದು ಅಂದರೆ ಜುಲೈ 19 ಹಾಗೂ ಜುಲೈ 22ರಂದು ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ಮಾಡಿಕೊಡುವುದಾಗಿ ತಿಳಿಸಿದೆ.
    ವಿದ್ಯಾರ್ಥಿಗಳು ತಮ್ಮ ವಾಸ ಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಉಚಿತ ಪ್ರಯಾಣ ಮಾಡಬಹುದಾಗಿದ್ದು, ಪರೀಕ್ಷಾ ಪ್ರಮಾಣ ಪತ್ರ ತೋರಿಸುವ ಮೂಲಕ ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ರಾಜ್ಯಾದ್ಯಂತ ಎಲ್ಲಾ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೂ ಇದು ಅನ್ವಯವಾಗಲಿದ್ದು, ಪರೀಕ್ಷಾ ಕೇಂದ್ರದ ತನಕ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. ಈ ಸಂದರ್ಭದಲ್ಲಿ ಎಲ್ಲಾ ರೀತಿಯಲ್ಲೂ ಕೊರೋನಾ ನಿಯಮಾವಳಿಗಳನ್ನು ಪಾಲಿಸುವುದು ಅಗತ್ಯವಾಗಿದೆ ಎಂದು ಕೆಎಸ್‍ಆರ್‍ಟಿಸಿ ಸುತ್ತೋಲೆಯಲ್ಲಿ ತಿಳಿಸಿದೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top