ಯಲ್ಲಾಪುರ: ಇಲ್ಲಿನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಡಿ.ಎನ್.ಗಾಂವ್ಕಾರ ರಾಜೀನಾಮೆ ನೀಡಿದ್ದಾರೆ.
ಕೆಪಿಸಿಸಿ ಅಧ್ಯಕ್ಷರಿಗೆ ರಾಜೀನಾಮೆ ಪತ್ರ ಕಳುಹಿಸಿದ್ದು, 15 ವರ್ಷಗಳ ಕಾಲ ಅಧ್ಯಕ್ಷನಾಗಿ ಕಾರ್ಯನಿರ್ವಹಿಸುವುದಕ್ಕೆ ಅವಕಾಶ ನೀಡಿದ್ದಕ್ಕೆ ಪಕ್ಷದ ಹಿರಿಯರಿಗೆ, ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ಬೇರೆಯವರಿಗೆ ಅವಕಾಶ ನೀಡುವ ಉದ್ದೇಶದಿಂದ ರಾಜೀನಾಮೆ ನೀಡಿದ್ದೇನೆ. ಇನ್ನು ಮುಂದೆ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷ ಬಲವರ್ಧನೆಗೆ ಶ್ರಮಿಸುತ್ತೇನೆ ಎಂದಿದ್ದಾರೆ.