ಗೋಕರ್ಣ: ರಾಜ್ಯ ಪಶುಸಂಗೋಪನಾ ಸಚಿವ ಪ್ರಭು ಬಿ. ಚವ್ಹಾಣ್ ಗೋಕರ್ಣಕ್ಕೆ ಭೇಟಿ ನೀಡಿ ಮಹಾಗಣಪತಿ, ಮಹಾಬಲೇಶ್ವರನಿಗೆ ಪೂಜೆ ಸಲ್ಲಿಸಿದರು.
ಮಹಾಬಲೇಶ್ವರನ ಆತ್ಮಲಿಂಗಕ್ಕೆ ಕ್ಷೀರಾಭಿಷೇಕ, ರುದ್ರಾಭಿಷೇಕ ಮಾಡಿ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಿದರು. ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು ಎಲ್ಲಾ ಪೂಜಾ ಕಾರ್ಯಗಳನ್ನು ನಡೆಸಿಕೊಟ್ಟರು.