• Slide
    Slide
    Slide
    previous arrow
    next arrow
  • ರಾಜ್ಯ ಸರಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ’ಕ್ಕೆ ಅರ್ಜಿ ಸಲ್ಲಿಸಲು ಫೆ.10 ಕೊನೆಯ ದಿನ

    300x250 AD

    ಶಿರಸಿ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ. (ರಿ) ಶಿರಸಿ ಉತ್ತರಕನ್ನಡ ಇದರ 2020-21 ನೇ ಸಾಲಿನ ವಾರ್ಷಿಕ ಸರ್ವಸಾಧಾರಣ ಸಭೆ ಹಾಗೂ ಪ್ರತಿಭಾ ಪುರಸ್ಕಾರ ಪ್ರತಿ ವರ್ಷದಂತೆ ಈ ವರ್ಷ ಕೂಡಾ ನಡೆಯಲಿದ್ದು, ಕಾರ್ಯಕ್ರಮವನ್ನು ಫೆಬ್ರವರಿ 2022 ರ ಮಾಹೆಯಲ್ಲಿ ನಡೆಸಲು ತಿರ್ಮಾನಿಸಲಾಗಿದೆ.

    ಅದರಂತೆ ಶಿರಸಿ ತಾಲೂಕಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ರಾಜ್ಯ ಸರಕಾರಿ ನೌಕರರ ಮಕ್ಕಳ 2020-21 ನೇ ಸಾಲಿನ ಎಸ್.ಎಸ್. ಎಲ್.ಸಿ ಪರೀಕ್ಷೆಯಲ್ಲಿ ಶೇ 95% ಕ್ಕಿಂತ ಹೆಚ್ಚಿನ ಹಾಗೂ ಪಿ.ಯು.ಸಿ ದ್ವಿತೀಯ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಶೇ90% ಕ್ಕಿಂತ ಹೆಚ್ಚಿನ ಸಾಧನೆ ಮಾಡಿದ ವಿದ್ಯಾರ್ಥಿಗಳು ಹಾಗೂ ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸಾಧನೆ ಮಾಡಿದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪುರಸ್ಕರಿಸಿಲಾಗುವುದು. ಅರ್ಹರು ತಮ್ಮ ಅರ್ಜಿಯೊಂದಿಗೆ ದೃಢೀಕೃತ ಅಂಕಪಟ್ಟಿ, ಮೊಬೈಲ್ ಸಂಖ್ಯೆ, ಹಾಗೂ ಇತ್ತೀಚಿನ ಪಾಸ್‍ಪೋರ್ಟ ಅಳತೆಯ ಭಾವಚಿತ್ರವನ್ನು ಫೆ.10 ರ ಒಳಗೆ ಸಂಘದ ತಮ್ಮ ಇಲಾಖೆಯ ಪ್ರತಿನಿಧಿಗಳಿಗೆ ಸಲ್ಲಿಸಲು ಕೋರಿದೆ. ಕಾರ್ಯಕ್ರಮದ ದಿನಾಂಕವನ್ನು ನಂತರ ತಿಳಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

    300x250 AD

    ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನವರನ್ನು ಸಂಪರ್ಕಿಸಿ:
    ಶ್ರೀ ನಾರಾಯಣ ಜೆ ನಾಯ್ಕ, ಅಧ್ಯಕ್ಷರು, ಕ.ರಾ.ಸ.ನೌಕಕರ ಸಂಘ ಶಿರಸಿ. ಮೊ: 9448609631
    ಶ್ರೀ ವಿ.ವಿ ಭಟ್ಟ, ಕಾರ್ಯದರ್ಶಿಗಳು, ಕ.ರಾ.ಸ.ನೌಕಕರ ಸಂಘ ಶಿರಸಿ. ಮೊ:9448720079

    Share This
    300x250 AD
    300x250 AD
    300x250 AD
    Leaderboard Ad
    Back to top