ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು 2022-23 ನೇ ಸಾಲಿನ ಬಜೆಟ್ ಮಂಡಿಸುತ್ತಿದ್ದಾರೆ. ಇದು ವಿತ್ತ ಸಚಿವರ ನಾಲ್ಕನೇ ಬಜೆಟ್ ಆಗಿದ್ದು, ಕೋವಿಡ್ ಮೂರನೇ ಅಲೆ ಸಂದರ್ಭದಲ್ಲಿ ಮಂಡನೆಯಾಗುತ್ತಿರುವ ಈ ಬಜೆಟ್ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದೆ.
ಇದೇ ವೇಳೆ ಬಜೆಟ್ ಮಂಡನೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸುತ್ತ. ಆರ್ ಬಿಐ ನಿಂದಲೇ ಡಿಜಿಟಲ್ ಕರೆನ್ಸಿ ಆರಂಭ ಮಾಡಲಾಗುವುದು. ಎಸ್.ಸಿ. ಎಸ್ ಟಿ ರೈತರಿಗೆ ಆರ್ಥಿಕ ನೆರವು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರೈತರಿಗೆ ಸಹಕಾರ. ಬಂಡವಾಳ ಹೂಡಿಕೆ ಮೂಲಕ ಆರ್ಥಿಕ ಪ್ರಗತಿಗೆ ಯೋಜನೆ ರೂಪಿಸಲಾಗುವುದು. ಇದೇ ವರ್ಷದಲ್ಲೇ ಆರ್ ಬಿಐನಿಂದ ಡಿಜಿಟಲ್ ಕರೆನ್ಸಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು. ರಾಜ್ಯ ಸರ್ಕಾರಗಳಿಗೆ 50 ವರ್ಷಗಳ ಕಾಲ ಬಡ್ಡಿ ರಹಿತ ಸಾಲ ನೀಡಲಾಗುವುದು ಎಂದು ತಿಳಿಸಿದರು.
2022 ರಲ್ಲೇ ದೇಶದಲ್ಲಿ 5 ಜಿ ಸೇವೆ ಆರಂಭವಾಗಲಿದೆ. ಪ್ರತಿ ಹಳ್ಳಿಗಳಲ್ಲಿ ಆಪ್ಟಿಕಲ್ ಫೈಬಲ್ ಕೇಬಲ್ ಆರಂಭಾಗಲಿದೆ. ಒನ್ ನೇಷನ್ ಒನ್ ರಿಜಿಸ್ಟ್ರೇಷನ್ (ಒಂದು ದೇಶ, ಒಂದು ನೋಂದಣಿ) ವ್ಯವಸ್ಥೆ ಸ್ಥಾಪನೆ. ಆಸ್ತಿ ನೋಂದಣಿಗೆ ಡಿಜಿಟಲ್ ವ್ಯವಸ್ಥೆ ಜಾರಿ,ಆಸ್ತಿ ನೋಂದಣಿ ಇನ್ಮುಂದೆ ಡಿಜಿಟಲೀಕರಣ ಮಾಡಲಾಗುವುದು ಎಂದು ತಿಳಿಸಿದ್ದಾರೆ.
75 ಜಿಲ್ಲೆಗಳಲ್ಲಿ 75 ಡಿಜಿಟಲ್ ಬ್ಯಾಂಕ್ ಸ್ಥಾಪನೆ ಮಾಡಲಾಗುವುದು. ಗ್ರಾಮ ಸೌಕರ್ಯ ಅಭಿವೃದ್ಧಿ ಆರ್ಥಿಕ ನೆರವುಉ. ಎಲ್ಲಾ ಫೋಸ್ಟ್ ಆಫೀಸ್ ಗಳಲ್ಲೂ ಬ್ಯಾಕಿಂಗ್ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದ್ದಾರೆ. ಇ-ಪಾಸ್ ಪೋರ್ಟ್ 2023 ರಲ್ಲಿ ಜಾರಿಗೊಳಿಸಲಾಗುವುದು. ಹೊಸ ತಂತ್ರಜ್ಞಾನದೊಂದಿಗೆ ಇಪಾಸ್ ಪೋರ್ಟ್ ಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.