
ಬೆಂಗಳೂರು: ರಾಜ್ಯದಲ್ಲಿ 250 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು, ಆರೋಗ್ಯ ಸಂಕೀರ್ಣಗಳಾಗಿ ಮೇಲ್ದರ್ಜೆಗೆ ಏರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಮೇಲ್ದರ್ಜೆಗೇರಿಸಲು ಆಯ್ಕೆಯಾಗುವ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕನಿಷ್ಠ 2 ಎಕರೆಗಳಷ್ಟು ಜಾಗವಿರಬೇಕು. ಮೇಲ್ದರ್ಜೆಗೆ ಏರಿಸಿದ ಬಳಿಕ ಆ ಕೇಂದ್ರಗಳಲ್ಲಿ ಇಬ್ಬರು ಎಂಬಿಬಿಎಸ್ ವೈದ್ಯರು, ಒಬ್ಬರ ಬಿಎಎಂಎಸ್ ವೈದ್ಯರು ಸೇವೆ ನೀಡಲಿದ್ದಾರೆ. ಹಾಗೆಯೇ ದಿನದ 24 ಗಂಟೆಗಳ ಕಾಲ ಇಲ್ಲಿ ಸೇವೆ ದೊರೆಯಲಿದೆ.
ರಾಜ್ಯದ ಆರೋಗ್ಯ ಕೇಂದ್ರಗಳನ್ನು ಮಾದರಿ ಆರೋಗ್ಯ ಕೇಂದ್ರಗಳನ್ನಾಗಿ ರೂಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಈ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಒಟ್ಟು 3 ಕೋಟಿ ರೂ. ವೆಚ್ಚದಲ್ಲಿ ಆಸ್ಪತ್ರೆ, 2 ಕೋಟಿ ರೂ. ವೆಚ್ಚದಲ್ಲಿ ವಸತಿ ಗೃಹ ನಿರ್ಮಾಣ ಮಾಡುವುದಾಗಿಯೂ ಸರ್ಕಾರ ತಿಳಿಸಿದೆ.