ಕಾರವಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಫೆ.2 ರಂದು ಬೆಳಿಗ್ಗೆ 10.30 ಕ್ಕೆ ಬೆಳೂರಿನ ಬಿಂದು ಮಾಧವ ದೇವಸ್ಥಾನ ರಂಗಮಂದಿರದಲ್ಲಿ ಜನಪರ ಉತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಖಾತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ವಿಧಾನಸಭೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನಪರಿಷತ್ತು ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ಜಿಲ್ಲೆಯ ಎಲ್ಲ ಶಾಸಕರು ಮತ್ತು ಇನ್ನಿತರ ಗಣ್ಯ ವ್ಯಕ್ತಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.