
ಶಿರಸಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಇವರು ಹಮ್ಮಿಕೊಂಡ ಬೆಳಗಾವಿ ವಿಭಾಗ ಮಟ್ಟದ ಸಾಂಸ್ಕೃತಿಕ ರಸಸಂಜೆ ಕಾರ್ಯಕ್ರಮದಲ್ಲಿ ಶಿರಸಿ ಜಿಲ್ಲಾ ಸಂಸ್ಥೆಯಿಂದ ಲಯನ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಹತ್ತನೆ ತರಗತಿ ಗೈಡ್ ವಿದ್ಯಾರ್ಥಿನಿ ವಿಂಧ್ಯಾ ವಿನಯ್ ಹೆಗಡೆ ಭಾಗವಹಿಸಿ ಭಾವಗೀತೆ ಗಾಯನ ಕಾರ್ಯಕ್ರಮ ನೀಡಿ ಎಲ್ಲರ ಮನಗೆದ್ದಿದ್ದಾಳೆ.
ಉತ್ತಮ ಪ್ರದರ್ಶನ ನೀಡಿದ ವಿದ್ಯಾರ್ಥಿನಿಗೆ ಲಯನ್ಸ ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ಪಾಲಕರು ಶುಭ ಹಾರೈಸಿದ್ದಾರೆ.