ಕಾರವಾರ: ನಗರ ವ್ಯಾಪ್ತಿಯ ವಿಜಯ ನಗರದಲ್ಲಿರುವ ಬಿಸಿಎಂ ಹಾಸ್ಟೆಲ್‌ಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮಂಗಳವಾರ ರಾತ್ರಿ ದಿಢೀರ್ ಭೇಟಿ ನೀಡಿ, ಅಲ್ಲಿನ ವ್ಯವಸ್ಥೆಯ ಕುರಿತು ಪರಿಶೀಲನೆ ನಡೆಸಿ, ವಿದ್ಯಾರ್ಥಿಗಳ ಜೊತೆ ಕುಳಿತು ಊಟ ಮಾಡಿದರು.
ವಿಜಯನಗರದಲ್ಲಿರುವ ಬಿಸಿಎಂ ಹಾಸ್ಟೆಲ್‌ನ ಅವ್ಯವಸ್ಥೆ ಹಾಗೂ ಉಟೋಪಚಾರದಲ್ಲಿನ ಸಮಸ್ಯೆಯ ಕುರಿತು ಕಳೆದ ಕೆಲವು ದಿನಗಳಿಂದ ಆರೋಪಗಳು ಕೇಳಿ ಬರುತ್ತಿದ್ದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ದಿಢೀರ್ ಭೇಟಿ ನೀಡಿದರು. ಅಲ್ಲಿನ ಶಾಚಾಲಯ ಹಾಗೂ ಆವರಣದ ಅವ್ಯವಸ್ಥೆಯನ್ನು ಪರಿಶೀಲಿಸಿ, ಅಸಮಾಧಾನ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳ ಜೊತೆ ಕೆಲ ಸಮಯ ಹಾಸ್ಟೆಲ್ ಸಮಸ್ಯೆಗಳ ಕುರಿತು ಚರ್ಚಿಸಿದರು. ಬಳಿಕ ವಿದ್ಯಾರ್ಥಿಗಳ ಜೊತೆಯಲ್ಲಿ ಕುಳಿತು ಊಟ ಮಾಡುವ ಮೂಲಕ ಆಹಾರದ ಗುಣಮಟ್ಟವನ್ನು ಗಮನಿಸಿದರು.
ಅಲ್ಲದೇ, ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಊಟೋಪಚಾರ ಸೇರಿದಂತೆ ಇನ್ನಿತರ ಯಾವುದೇ ಸಮಸ್ಯೆಗಳಾಗದಂತೆ ಗಮನಹರಿಸುವಂತೆ ಹಾಸ್ಟೇಲ್ ಮುಖ್ಯಸ್ಥರು ಹಾಗೂ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಬಿಸಿಎಂ ಹಾಸ್ಟೇಲ್ ಅಧಿಕಾರಿ ಪ್ರವೀಣಕುಮಾರ, ಹಿಂದುಳಿದ ಕಲ್ಯಾಣ ಇಲಾಖೆಯ ತಾಲೂಕಾ ಕಲ್ಯಾಣಾಧಿಕಾರಿ ಎನ್.ಎಸ್.ರಜಪೂತ, ಹಾಸ್ಟೆಲ್ ವಾರ್ಡನ್ ಕೆ.ವೈ.ಕಾಂಬಳೆ ಸೇರಿದಂತೆ ಇತರರು ಇದ್ದರು.